ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Lok Sabha Elections | ಶಿಂದೆ, ಅಜಿತ್‌ ಪವಾರ್‌ ಜೊತೆ ಶಾ ಸಭೆ

Published 6 ಮಾರ್ಚ್ 2024, 12:15 IST
Last Updated 6 ಮಾರ್ಚ್ 2024, 12:15 IST
ಅಕ್ಷರ ಗಾತ್ರ

ಮುಂಬೈ : ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರೊಂದಿಗೆ ಬುಧವಾರ ಸಭೆ ನಡೆಸಿದರು. ರಾಜ್ಯದ 48 ಲೋಕಸಭಾ ಕ್ಷೇತ್ರಗಳ ಸೀಟು ಹಂಚಿಕೆ ಕುರಿತು ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.

30 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಹೇಳುತ್ತಿದೆ. ಅಜಿತ್ ಪವಾರ್‌ ಅವರ ಪಕ್ಷಕ್ಕಿಂತ ಶಿಂದೆ ನೇತೃತ್ವದ ಶಿವಸೇನಾ ಹೆಚ್ಚು ಕಡೆಗಳಲ್ಲಿ ಕಣಕ್ಕಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣೆಯಲ್ಲಿ ಬಿಜೆಪಿಯು 370ಕ್ಕೂ ಹೆಚ್ಚು ಸ್ಥಾನಗಳಲ್ಲಿ ಹಾಗೂ ಎನ್‌ಡಿಎ 400 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಪದೇ ಪದೇ ಹೇಳುತ್ತಿದ್ದಾರೆ. ಬಿಜೆಪಿ ಗುರಿ ಸಾಧಿಸಲು ಮಹಾರಾಷ್ಟ್ರ ನಿರ್ಣಾಯಕ ಪಾತ್ರ ವಹಿಸುತ್ತದೆ. 48 ಕ್ಷೇತ್ರಗಳ ಪೈಕಿ 45ರಲ್ಲಿ ಜಯ ಗಳಿಸುವ ಗುರಿಯನ್ನು ಬಿಜೆಪಿ ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT