ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ಚುನಾವಣಾ ತಂತ್ರಗಳನ್ನು ರೂಪಿಸುತ್ತಿದ್ದು ಇದರ ಭಾಗವಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಶುಕ್ರವಾರ) ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಭೇಟಿ ವೇಳೆ ಅಮಿತ್ ಶಾ ಮತ್ತು ನಿತೀಶ್ ಕುಮಾರ್ ಅವರು ಚುನಾವಣಾ ಪ್ರಚಾರ ತಂತ್ರ ಹಾಗೂ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಅವರು ಗುರುವಾರ ಸಂಜೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
.ಹುಲಿ ದಾಳಿ | ‘ಬದುಕು ಕಳೆದುಕೊಂಡವರೆಂದು’ ಪರಿಗಣಿಸಿ ಪೂರ್ಣ ಪರಿಹಾರ: ಸಿಎಂ ತಾಕೀತು.ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಕಾಂತಾರ ಆರ್ಭಟ: ಎರಡನೇ ವಾರ ಗಳಿಸಿದ್ದೆಷ್ಟು?.
ಈ ಬಾರಿ ಬಿಜೆಪಿ ಹಾಗೂ ಜೆಡಿ(ಯು) ಮೈತ್ರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡುವೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾ, ಹಾಗೆ ಮಾಡಲು ನಾನು ಯಾರು? ಒಂದು ಕಾರ್ಯವಿಧಾನವಿದೆ. ಶಾಸಕಾಂಗ ಸದಸ್ಯರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬಾರಿ ಚುನಾವಣೆಯಲ್ಲಿ ನಿತೀಶ್ ನೇತೃತ್ವದಲ್ಲಿ ಎನ್ಡಿಎ ಸ್ಪರ್ಧಿಸುತ್ತಿದೆ ಎಂದು ಹೇಳಿದ್ದೇವೆ, ಆ ಬಗ್ಗೆ ಸಂದೇಹವಿಲ್ಲ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಆಯ್ಕೆಯಲ್ಲಿ ಮಹಾರಾಷ್ಟ್ರದಲ್ಲಿ ಆದ ರೀತಿ ಬಿಹಾರದಲ್ಲೂ ಆಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಶಾ, ಸುದ್ದಿ ವಾಹಿನಿಗಳಿಗೆ ಟಿಆರ್ಪಿ ಸಿಗುವ ರೀತಿಯಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
.ಟಿವಿಕೆ ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ: ಮದ್ರಾಸ್ ಹೈಕೋರ್ಟ್ಗೆ ಚುನಾವಣಾ ಆಯೋಗ.ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂಗೆ ಪತ್ರ ಬರೆದ ಯತ್ನಾಳ.
ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯಿಸಿರುವ ಆರ್ಜೆಡಿ ವಕ್ತಾರ ಚಿತ್ತರಂಜನ್ ಗಗನ್, ನಿತೀಶ್ ಕುಮಾರ್ ಅವರಿಗೆ ಮತ್ತೊಂದು ಅವಧಿಗೆ ಸಿಎಂ ಸ್ಥಾನ ನೀಡುವ ಬಗ್ಗೆ ಅಮಿತ್ ಶಾ ಅನುಮಾನ ವ್ಯಕ್ತಪಡಿಸಿದ್ದಾರೆ ಎಂಬುವುದು ಸ್ಪಷ್ಟವಾಗಿದೆ. ನಿತೀಶ್ ಅವರನ್ನು ಮಣಿಸಲು ಬಿಜೆಪಿ ಯೋಜಿಸುತ್ತಿದೆ ಎಂದೂ ಆರೋಪಿಸಿದ್ದಾರೆ.

243 ಸ್ಥಾನಗಳ ಪೈಕಿ ತಲಾ 101 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಸ್ಪರ್ಧಿಸಲಿವೆ. ಇನ್ನುಳಿದ ಸ್ಥಾನಗಳನ್ನು ಇತರೆ ಸಣ್ಣ ಮೈತ್ರಿ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ.

ಬಿಹಾರ ವಿಧಾನಸಭೆ ಚುನಾವಣೆಯು ನವೆಂಬರ್ 6 ಮತ್ತು 11ರಂದು ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
.Photos | ದೀಪಾವಳಿಯಲ್ಲಿ ದೀಪಗಳ ಬೆಳಕು: ಕುಂಬಾರನಿಂದ ಮಾರುಕಟ್ಟೆವರೆಗೆ ಹಣತೆಯ ಪಯಣ.OTT Release: ಏಳುಮಲೆ, ಕಿಷ್ಕಿಂಧಾಪುರಿ ಸೇರಿದಂತೆ ಪ್ರಮುಖ ಸಿನಿಮಾಗಳ ಬಿಡುಗಡೆ.ಛತ್ತೀಸಗಢ: ಪೊಲೀಸರು, ಭದ್ರತಾ ಪಡೆಯ ಸಮ್ಮುಖದಲ್ಲಿ 210 ನಕ್ಸಲರು ಶರಣು.Ranji Trophy: ಶ್ರೇಯಸ್ 8 ವಿಕೆಟ್ ಉರುಳಿಸಿದರೂ ಮುನ್ನಡೆ ಬಿಟ್ಟುಕೊಡದ ಸೌರಾಷ್ಟ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.