ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಅಧಿಕಾರದಲ್ಲಿರುವವರೆಗೆ ಮೀಸಲಾತಿ ರದ್ದು ಸಾಧ್ಯವಿಲ್ಲ:ರಾಹುಲ್‌ಗೆ ಅಮಿತ್ ಶಾ

Published : 11 ಸೆಪ್ಟೆಂಬರ್ 2024, 7:50 IST
Last Updated : 11 ಸೆಪ್ಟೆಂಬರ್ 2024, 7:50 IST
ಫಾಲೋ ಮಾಡಿ
Comments

ನವದೆಹಲಿ: ಮೀಸಲಾತಿ ಕುರಿತಂತೆ ಅಮೆರಿಕದಲ್ಲಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ, ಇದು ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ಮುಖವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಅಧಿಕಾರದಲ್ಲಿರುವವರೆಗೆ ಮೀಸಲಾತಿಯನ್ನು ರದ್ದುಗೊಳಿಸುವುದಾಗಲಿ, ರಾಷ್ಟ್ರೀಯ ಭದ್ರತೆಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

ಭಾರತವು ಉತ್ತಮ ಸ್ಥಿತಿಗೆ ತಲುಪಿದಾಗ ಕಾಂಗ್ರೆಸ್, ಮೀಸಲಾತಿ ರದ್ದು ಮಾಡುವ ಕುರಿತು ಚಿಂತನೆ ನಡೆಸಲಿದೆ. ಸದ್ಯ, ಅದರ ಚಿಂತನೆ ಇಲ್ಲ ಎಂದು ಅಮೆರಿಕದ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿದ್ದರು.

‘ದೇಶವನ್ನು ವಿಭಜಿಸುವ ಶಕ್ತಿಗಳ ಜೊತೆ ನಿಂತು ದೇಶ ವಿರೋಧಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ಗೆ ಅಭ್ಯಾಸವಾಗಿಬಿಟ್ಟಿದೆ’ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಶಾ ಕಿಡಿಕಾರಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ನ ರಾಷ್ಟ್ರವಿರೋಧಿ ಮತ್ತು ಮೀಸಲಾತಿ ವಿರೋಧಿ ಅಜೆಂಡಾ ವನ್ನು ಬೆಂಬಲಿಸುತ್ತಿರುವುದಿರಲಿ ಅಥವಾ ವಿದೇಶಿ ವೇದಿಕೆಗಳಲ್ಲಿ "ಭಾರತ ವಿರೋಧಿ ಹೇಳಿಕೆಗಳನ್ನು" ನೀಡುತ್ತಿರುವುದಿರಲಿ, ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಮತ್ತು ರಾಷ್ಟ್ರೀಯ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪ್ರಾದೇಶಿಕತೆ, ಧರ್ಮ ಮತ್ತು ಭಾಷಿಕ ಭಿನ್ನಾಭಿಪ್ರಾಯ ಉಂಟುಮಾಡುವ ಕಾಂಗ್ರೆಸ್‌ನ ರಾಜಕೀಯವನ್ನು ರಾಹುಲ್ ಗಾಂಧಿಯವರ ಹೇಳಿಕೆಯು ಬಯಲು ಮಾಡಿದೆ. ದೇಶದಲ್ಲಿ ಮೀಸಲಾತಿಯನ್ನು ರದ್ದುಗೊಳಿಸುವ ಬಗ್ಗೆ ಮಾತನಾಡುವ ಮೂಲಕ ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ಮುಖವನ್ನು ಮುನ್ನೆಲೆಗೆ ತಂದಿದ್ದಾರೆ’ಎಂದು ಶಾ ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕನ ಚಿಂತನೆ ಏನು ಎಂಬುದನ್ನು ಅವರ ಹೇಳಿಕೆಯು ಬಹಿರಂಗಪಡಿಸಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT