ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

#MeToo: ಸಚಿವ ಅಕ್ಬರ್ ವಿರುದ್ಧದ ಆರೋಪದ ಬಗ್ಗೆ ಪರಿಶೀಲಿಸುತ್ತೇವೆ ಎಂದ ಅಮಿತ್ ಶಾ

Last Updated 13 ಅಕ್ಟೋಬರ್ 2018, 4:31 IST
ಅಕ್ಷರ ಗಾತ್ರ

ನವದೆಹಲಿ: ಸಚಿವಎಂ.ಜೆ. ಅಕ್ಬರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೊನೆಗೂ ಮೌನಮುರಿದಿದ್ದಾರೆ. ಸ್ಥಳೀಯ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆರೋಪ ಸತ್ಯವೇ ಅಥವಾ ಸುಳ್ಳೇ ಎಂಬ ಕುರಿತು ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ.

‘ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾದ ಸಂದೇಶದ ಸತ್ಯಾಸತ್ಯತೆ ಮತ್ತು ಆ ಸಂದೇಶ ಪ್ರಕಟಿಸಿದ ವ್ಯಕ್ತಿಯ ಹಿನ್ನೆಲೆ ಬಗ್ಗೆ ಪರಿಶೀಲಿಸಲಿದ್ದೇವೆ. ನೀವು ನನ್ನ ಹೆಸರನ್ನು ಬಳಸಿಕೊಂಡೂ ಸಂದೇಶ ಪ್ರಕಟಿಸಬಹುದು. ನಾವು ಆ ಬಗ್ಗೆ ಖಂಡಿತಾ ಗಮನಹರಿಸುತ್ತೇವೆ’ ಎಂದು ಶಾ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಆರಂಭವಾಗಿರುವ #MeToo ಅಭಿಯಾನದ ಮೂಲಕ ಅನೇಕ ಪತ್ರಕರ್ತೆಯರು ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಅಕ್ಬರ್‌ ರಾಜೀನಾಮೆಗೆ ಒತ್ತಡ ಹೆಚ್ಚಿದೆ.

ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಬಗ್ಗೆ ಪತ್ರಕರ್ತೆ ಪ್ರಿಯಾ ರಮಣಿ ಅವರುವೋಗ್‌ ಇಂಡಿಯಾದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಲೇಖನವೊಂದನ್ನು ಬರೆದಿದ್ದರು. ಆದರೆ, ಅದರಲ್ಲಿ ಅಕ್ಬರ್ ಹೆಸರನ್ನು ಉಲ್ಲೇಖಿಸಿರಲಿಲ್ಲ. ಇತ್ತೀಚೆಗೆ ಆ ಲೇಖನದ ಲಿಂಕ್ ಅನ್ನು ಟ್ವೀಟ್ ಮಾಡಿದ್ದ ಅವರು,‘ಎಂಜೆ ಅಕ್ಬರ್ ಕತೆಯೊಂದಿಗೆ ಇದನ್ನು ಆರಂಭಿಸುತ್ತೇನೆ. ಆದರೆ ಅವರ ಹೆಸರನ್ನು ಉಲ್ಲೇಖಿಸಿಲ್ಲ; ಯಾಕೆಂದರೆ ಅವರೇನೂ ‘ಮಾಡಿಲ್ಲ’. ಈ ಬೇಟೆಗಾರನಿಂದ ಅನೇಕ ಮಹಿಳೆಯರಿಗೆ ಕೆಟ್ಟ ಅನುಭವ ಆಗಿರಬಹುದು. ಬಹುಶಃ ಅವರದನ್ನು ಹಂಚಿಕೊಳ್ಳಬಹುದು’ ಎಂದು ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT