ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡಮಾರುತ | ಪ. ಬಂಗಾಳ, ಅಸ್ಸಾಂ, ಮಣಿಪುರ ಸಿಎಂಗಳ ಜತೆ ಅಮಿತ್‌ ಶಾ ಚರ್ಚೆ

Published 1 ಏಪ್ರಿಲ್ 2024, 11:08 IST
Last Updated 1 ಏಪ್ರಿಲ್ 2024, 11:08 IST
ಅಕ್ಷರ ಗಾತ್ರ

ನವದೆಹಲಿ: ಚಂಡಮಾರುತದಿಂದಾಗಿ ಉಂಟಾಗಿರುವ ಹಾನಿ ಕುರಿತು ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಮಣಿಪುರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ನೆರವಿನ ಭರವಸೆ ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಇಂತಹ ಸಂಕಷ್ಟದ ಸಮಯದಲ್ಲಿ ಕೇಂದ್ರವು ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವು ಒದಗಿಸುತ್ತದೆ. ಅಲ್ಲಿನ ಬಿಜೆಪಿ ಕಾರ್ಯಕರ್ತರು ಸಂತ್ರಸ್ತರಿಗೆ ಸಹಾಯಹಸ್ತ ಚಾಚಲು’ ಮನವಿ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ 5 ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಲ್ಮಾರಾ-ಮಂಕಚಾರ್ ಜಿಲ್ಲೆಯ ಬ್ರಹ್ಮಪುತ್ರ ನದಿಯಲ್ಲಿ ದೋಣಿ ಮುಳುಗಿ ಮಗು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಅಸ್ಸಾಂ ಮತ್ತು ಮಣಿಪುರದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಕಟ್ಟಡಗಳ ಕುಸಿತ ಸೇರಿದಂತೆ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅಮಿತ್‌ ಶಾ, ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT