ಜಮ್ಮು: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರದಂದು ಅಧಿಕೃತ ಚಾಲನೆ ನೀಡಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಅಮಿತ್ ಶಾ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಬಿಜೆಪಿ ಪ್ರಣಾಳಿಕೆಯನ್ನು ಅಮಿತ್ ಶಾ ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ಸಂಜೆ ಪ್ರಣಾಳಿಕೆ ಬಿಡುಗಡೆ ಬಳಿಕ ಪಕ್ಷದ ನಾಯಕರೊಂದಿಗೆ ಅಮಿತ್ ಶಾ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯಲ್ಲಿ ನಾಯಕರ ಮಧ್ಯೆ ಅಸಮಾಧಾನ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಭೇಟಿಯು ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ.
ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.