ಮೊಳಕಾಲ್ಮುರು: ‘ಚಿತ್ರದುರ್ಗದಲ್ಲಿ ಮೇ 9ರಂದು ನಡೆಯಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಪ್ಪುಬಾವುಟ ಪ್ರದರ್ಶನ ಮಾಡಲಾಗುವುದು’ ಎಂದು ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು ಶನಿವಾರ ತಾಲ್ಲೂಕು ಕಚೇರಿಗೆ ಪತ್ರ ನೀಡಿದರು.

‘ಜಿಲ್ಲೆಯ ಜನರು 30 ವರ್ಷಗಳಿಂದ ನೀರಾವರಿಗಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಈ ನಿಟ್ಟಿನಲ್ಲಿ ಜಾರಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಕುಂಟುತ್ತಾ ಸಾಗಿದೆ. ಅನುದಾನ ಕೊರತೆ ಕಾಡುತ್ತಿದ್ದು ಕೇಂದ್ರ ಸರ್ಕಾರ ನೀಡಿರುವ ಭರವಸೆಯಂತೆ ₹ 5,300 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಅಮಿತ್ ಶಾ ಭೇಟಿಗೂ ಮುನ್ನವೇ ಬಿಡುಗಡೆ ಆದೇಶವಾಗಬೇಕು’ ಎಂದು ಆಗ್ರಹಿಸಿದರು.

ಹಿಂದಿನ ವರ್ಷದ ಮುಂಗಾರು ಹಂಗಾಮಿನ ಫಸಲ್ ಬಿಮಾ ಯೋಜನೆ ನಿಗದಿಯಲ್ಲಿ ತಾರತಮ್ಯ ಮಾಡಲಾಗಿದೆ. ಸಂಪೂರ್ಣ ಬೆಳೆ ನಷ್ಟವಾಗಿದ್ದರೂ ಕೆಲ ಗ್ರಾಮ ಪಂಚಾಯಿತಿಗಳಿಗೆ ಮಾತ್ರ ತೋರಿಕೆ ವಿಮೆ ಮಂಜೂರು ಮಾಡಿ ವಿಮೆ ಕಂಪನಿ ಮೋಸ ಮಾಡಿದೆ. ಇದಕ್ಕೆ ಕೃಷಿ, ಕಂದಾಯ ಅಧಿಕಾರಿಗಳು ಕೈಜೋಡಿಸಿದ್ದಾರೆ. ಇದನ್ನು ಪ್ರತಿಭಟಿಸಿ ಮೇ 12ರಂದು ಹಿರೇಹಳ್ಳಿ ಟೋಲ್ ಪ್ಲಾಜಾ ಬಳಿ ರಸ್ತೆತಡೆ ನಡೆಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಉಪ ತಹಶೀಲ್ದಾರ್ ಮಹಾಂತೇಶ್ ಮನವಿ ಸ್ವೀಕರಿಸಿದರು.

ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಮರ್ಲಹಳ್ಳಿ ರವಿಕುಮಾರ್, ಸೂರಮ್ಮನಹಳ್ಳಿ ರಾಜಣ್ಣ, ಹಿರೇಹಳ್ಳಿ ತಿಪ್ಪೇಸ್ವಾಮಿ, ಗೋವಿಂದಪ್ಪ, ಕಾಮಯ್ಯ, ಮಂಜಣ್ಣ, ಪ್ರಕಾಶ್, ಕೋಟಿ ವೀರಣ್ಣ, ದೊಡ್ಡಣ್ಣ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-44-616320160

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.