ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಯಮತ್ತೂರು: ಅಮೋನಿಯಾ ಅನಿಲ ಸೋರಿಕೆ

Published 30 ಏಪ್ರಿಲ್ 2024, 16:28 IST
Last Updated 30 ಏಪ್ರಿಲ್ 2024, 16:28 IST
ಅಕ್ಷರ ಗಾತ್ರ

ಕೊಯಮತ್ತೂರು (ತಮಿಳುನಾಡು): ಜಿಲ್ಲೆಯ ಕರಮದೈ ನಗರದ ಚೆನ್ನಿವೀರಂ ಪಾಳ್ಯಂ ಗ್ರಾಮದಲ್ಲಿ ಸೋಮವಾರ ರಾತ್ರಿ ಸ್ಥಗಿತಗೊಂಡ ಚಿಪ್ಸ್‌ ರಫ್ತು ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು.

‘ಅನಿಲ ಸೋರಿಕೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಅಧಿಕಾರಿಗಳು 250ಕ್ಕೂ ಹೆಚ್ಚು ಕುಟುಂಬಗಳನ್ನು ಗ್ರಾಮದಿಂದ ಕಲ್ಯಾಣ ಮಂಟಪವೊಂದಕ್ಕೆ ಸ್ಥಳಾಂತರಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಕಳೆದ ನಾಲ್ಕು ವರ್ಷಗಳ ಹಿಂದೆಯೇ ಈ ಚಿಪ್ಸ್‌ ರಫ್ತು ಘಟಕ ಸ್ಥಗಿತಗೊಂಡಿದೆ. ಇದರ ಶೈತ್ಯಾಗಾರ‌ದಲ್ಲಿ ಅನಿಲ ಸೋರಿಕೆಯಾಗಿದ್ದು, ಅದು ಗಾಳಿಯಲ್ಲಿ ಸೇರಿಕೊಂಡಿದೆ. ಇದರಿಂದಾಗಿ ಕೆಲವು ಗ್ರಾಮಸ್ಥರಿಗೆ ಕಣ್ಣಿನ ಸಮಸ್ಯೆ ಕಾಣಿಸಿಕೊಂಡಿದೆ’ ಎಂದಿದ್ದಾರೆ.

‘ಚಿಪ್ಸ್‌ ರಫ್ತು ಘಟಕವನ್ನು ಕೆಲವು ದಿನಗಳ ಹಿಂದೆ ಬೇರೆಯವರಿಗೆ ಮಾರಾಟ ಮಾಡಲಾಗಿತ್ತು. ಅದರ ನವೀಕರಣದ ಸಂದರ್ಭದಲ್ಲಿ ಅನಿಲ ಸೋರಿಕೆಯಾಗಿರುವ ಸಾಧ್ಯತೆ ಇದೆ. ಘಟನೆ ಬಗ್ಗೆ ತಿಳಿದ ತಕ್ಷಣವೇ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಯು ಸ್ಥಳಕ್ಕಾಗಮಿಸಿ, ಅನಿಲ ಟ್ಯಾಂಕ್‌ನ ಕವಾಟವನ್ನು ಮುಚ್ಚಿದ್ದಾರೆ. ಇದರಿ‌ಂದಾಗಬಹುದಾದ ದುರಂತವನ್ನು ತಡೆದಿದ್ದಾರೆ’ ಎಂದೂ ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT