ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಲಘು ಭೂಕಂಪ ಸಂಭವಿಸಿದೆ.
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಸುಕಿನ ವೇಳೆ 3.49ಕ್ಕೆ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ.
ಆಗಸ್ಟ್ 16, ಗುರುವಾರದಂದು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದಲ್ಲಿ ಕಂಪನದ ಅನುಭವ ಉಂಟಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.