ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ | ಬಾಂಬ್‌ ತಯಾರಿಸುತ್ತಿದ್ದ ವೇಳೆ ಸ್ಫೋಟ; ವಿದ್ಯಾರ್ಥಿಗೆ ಗಾಯ

Published 14 ಡಿಸೆಂಬರ್ 2023, 2:38 IST
Last Updated 14 ಡಿಸೆಂಬರ್ 2023, 2:38 IST
ಅಕ್ಷರ ಗಾತ್ರ

ಪ್ರಯಾಗರಾಜ್: ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ ಕೋಣೆಯಲ್ಲಿ ತಾನೇ ತಯಾರಿಸುತ್ತಿದ್ದ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಈ ಘಟನೆ ನಡೆದಿದೆ. ಎಂ.ಎ ವಿದ್ಯಾರ್ಥಿಯಾಗಿರುವ ಪ್ರಭಾತ್‌ ಯಾದವ್ ಎಂಬುವವರು ತಮ್ಮ ಕೋಣೆಯಲ್ಲಿ ಏಕೆ ಬಾಂಬ್‌ ತಯಾರಿಸುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿಲ್ಲ ಎಂದು ಸಹಾಯಕ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಹೇಳಿದ್ದಾರೆ.

ಗಾಯಾಳನ್ನು ಎಸ್‌ಆರ್‌ಎನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದಿದ್ದಾರೆ.

ಪ್ರಭಾತ್‌ ವಿರುದ್ಧ ಶೀಘ್ರದಲ್ಲೇ ಪ್ರಕರಣ ದಾಖಲಿಸಲಾಗುವುದು ಎಂದು ರಾಜೇಶ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT