ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾವಲಂಬನೆ: ಅಂಡಮಾನ್‌–ನಿಕೋಬಾರ್‌ನಿಂದ ಮಹತ್ವದ ಪಾತ್ರ

ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ
Last Updated 9 ಆಗಸ್ಟ್ 2020, 14:12 IST
ಅಕ್ಷರ ಗಾತ್ರ

ನವದೆಹಲಿ: ಎಲ್ಲ ಕ್ಷೇತ್ರಗಳಲ್ಲಿ ಸ್ವಾಲಂಬನೆ ಸಾಧಿಸಬೇಕು ಎಂಬಪ್ರಯತ್ನದ ಭಾಗವಾಗಿ ದೇಶ ರೂಪಿಸುವ ಕಾರ್ಯಕ್ರಮದಲ್ಲಿ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಲಾಂತರ್ಗಾಮಿ ಆಪ್ಟಿಕಲ್‌ ಫೈಬರ್‌ ಕೇಬಲ್‌ ಮೂಲಕ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಸಮೂಹಕ್ಕೆ ಇಂಟರ್‌ನೆಟ್‌ ಸೌಲಭ್ಯಕ್ಕೆ ಚಾಲನೆ ನೀಡುವ ಮುನ್ನಾ ದಿನವಾದ ಭಾನುವಾರ ಅವರು ದ್ವೀಪಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದರು.

‘ಸಾಗರದ ಮೂಲಕ ನಡೆಯುವ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ಪ್ರಮುಖ ಕೇಂದ್ರವಾಗುವ ಸಾಮರ್ಥ್ಯ ಈ ದ್ವೀಪಗಳಿಗಿದೆ. ಹೀಗಾಗಿ ಕಡಲಿಗೆ ಸಂಬಂಧಿಸಿದ ಸ್ವಾರ್ಟ್‌ಅಪ್‌ಗಳ ಕೇಂದ್ರವನ್ನಾಗಿ ಈ ದ್ವೀಪಸಮೂಹವನ್ನು ಅಭಿವೃದ್ಧಿಪಡಿಸಲು ಕೇಂದ್ರ ನಿರ್ಧರಿಸಿದೆ’ ಎಂದರು.

‘ಕಡಲ ಆಧಾರಿತ, ಸಾವಯವ ಹಾಗೂ ತೆಂಗು ಆಧಾರಿತ ಉತ್ಪನ್ನಗಳ ವ್ಯಾಪಾರಕ್ಕೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ’ ಎಂದು ಹೇಳಿದರು.

‘ಪೋರ್ಟ್‌ಬ್ಲೇರ್‌ ವಿಮಾನ ನಿಲ್ದಾಣವನ್ನು ವಿಸ್ತರಿಸಲಾಗುತ್ತಿದೆ. ಇದರಿಂದ ವಿಮಾನ ಸಂಪರ್ಕ ಹೆಚ್ಚಲಿದೆ. 300 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಶೀಘ್ರದಲ್ಲಿಯೇ ಪೂರ್ಣಗೊಳ್ಳುವುದು. ಈ ಅಂಶಗಳು ಸಹ ಪ್ರದೇಶದ ಅಭಿವೃದ್ದಿ ಸಹಕಾರಿಯಾಗಲಿವೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT