ಚಿಂತೂರು(ಆಂಧ್ರಪ್ರದೇಶ): ಕರ್ನೂಲ್ ಬಸ್ ದುರಂತ ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಬಸ್ ಅಪಘಾತ ಸಂಭವಿಸಿದ್ದು, ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಬಸ್ವೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ.

ಚಿಂತೂರಿನಿಂದ ನೆರೆಯ ತೆಲಂಗಾಣಕ್ಕೆ ತೆರಳುತ್ತಿದ್ದ ಈ ಬಸ್ನಲ್ಲಿ ಚಾಲಕ ಮತ್ತು ಕ್ಲೀನರ್ ಸೇರಿದಂತೆ 37 ಜನರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ದುರ್ಗಾ ದೇವಸ್ಥಾನದ ಸಮೀಪ ಬೆಳಿಗ್ಗೆ 4:30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ತಿಳಿಸಿದ್ದಾರೆ.

‘ಘಟನೆಯಲ್ಲಿ 9 ಜನರು ಮೃತಪಟ್ಟು, 22 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ’ ಎಂದು ಅವರು ತಿಳಿಸಿದ್ದಾರೆ.

ದಟ್ಟ ಮಂಜು ಆವರಿಸಿದ್ದರಿಂದ ಚಾಲಕನಿಗೆ ತಿರುವು ಕಾಣಿಸದೇ ಅಪಘಾತ ಸಂಭವಿಸಿರಬಹುದು ಎಂದು ಊಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬಸ್ಸಿನಲ್ಲಿದ್ದ ಪ್ರಯಾಣಿಕರು ಚಿಂತೂರಿನಿಂದ ತೆಲಂಗಾಣದ ಭದ್ರಾಚಲಂನಲ್ಲಿರುವ ಶ್ರೀ ರಾಮ ದೇವಸ್ಥಾನಕ್ಕೆ ಹೊರಟಿದ್ದರು ಎಂದು ಬರ್ದಾರ್ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಗೆ ಸೇರಿದ ಸ್ಲೀಪರ್ ಬಸ್ವೊಂದು ಕರ್ನೂಲ್ ಸಮೀಪ ಹೊತ್ತಿ ಉರಿದಿದ್ದು, 20 ಮಂದಿ ಸಜೀವ ದಹನವಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.