ಅಮರಾವತಿ: ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಆಂಧ್ರಪ್ರದೇಶದ ಹಣಕಾಸಿ ಸ್ಥಿತಿ ಹದಗೆಟ್ಟಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆರೋಪಿಸಿದ್ದಾರೆ.

ಮಹಾ ಲೆಕ್ಕ ಪರಿಶೋಧಕರ (ಸಿಎಜಿ) ಇತ್ತೀಚಿನ ವರದಿ ಉಲ್ಲೇಖಿಸಿ ಈ ಹೇಳಿಕೆ ನೀಡಿದ್ದಾರೆ. ಸಿಎಜಿ ವರದಿಯಲ್ಲಿ ತಿಳಿಸಿರುವ ಸೂಚಕಗಳು ಮತ್ತು ಅಂಕಿಅಂಶಗಳು ರಾಜ್ಯ ಸರ್ಕಾರದ ಆರ್ಥಿಕ ಸ್ಥಿರತೆಗೆ ಅನಿಶ್ಚಿತ ದೃಷ್ಟಿಕೋನವನ್ನು ಸ್ಪಷ್ಟವಾಗಿ ಸೂಚಿಸುತ್ತವೆ ಎಂದು ರೆಡ್ಡಿ ‘ಎಕ್ಸ್’ನಲ್ಲಿ ಹೇಳಿದ್ದಾರೆ.

ಸಾರ್ವಜನಿಕ ಹಣಕಾಸು ನಿರ್ವಹಣೆಯ ವರ್ಗೀಕರಣವು ಆಂಧ್ರಪ್ರದೇಶದಂತಹ ರಾಜ್ಯಗಳ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತಿದೆ ಎಂದು ಅವರು ಹೇಳಿದ್ದಾರೆ.

ಅಭಿವೃದ್ಧಿ ಅಗತ್ಯವಿರುವ ಕ್ಷೇತ್ರಗಳಲ್ಲಿ ಸರ್ಕಾರಿ ಹಣವನ್ನು ಸರಿಯಾದ ರೀತಿಯಲ್ಲಿ ವಿನಿಯೋಗಿಸಿದಾಗ ಮಾತ್ರ ಖಾಸಗಿ ಬಳಕೆ ಮತ್ತು ಹೂಡಿಕೆಯನ್ನು ಉತ್ತೇಜಿಸಬಹುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.