ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರದ ನೆಲ್ಲೂರು ಬಳಿ ಭೀಕರ ಅಪಘಾತ: 7 ಜನರ ಸಾವು– 20 ಜನರಿಗೆ ಗಾಯ

ಖಾಸಗಿ ಟೂರಿಸ್ಟ್ ಬಸ್ ಹಾಗೂ ಲಾರಿ ನಡುವೆ ನಡೆದ ಅಪಘಾತ
Published 10 ಫೆಬ್ರುವರಿ 2024, 3:35 IST
Last Updated 10 ಫೆಬ್ರುವರಿ 2024, 3:35 IST
ಅಕ್ಷರ ಗಾತ್ರ

ಅಮರಾವತಿ: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಮುಸನೂರು ಟೋಲ್ ಪ್ಲಾಜಾ ಬಳಿ ಶನಿವಾರ ನಸುಕಿನ ಜಾವ ಭೀಕರ ಬಸ್ ಅಪಘಾತ ಸಂಭವಿಸಿದೆ.

ಖಾಸಗಿ ಟೂರಿಸ್ಟ್ ಬಸ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, 20 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ.

ಕಬ್ಬಿಣದ ಸರಳು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ನೆಲ್ಲೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಇನ್ನೂ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಡಿಎಸ್‌ಪಿ ವೆಂಕಟರಮಣ ಅವರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಎಎನ್‌ಐ ಎಕ್ಸ್‌ ತಾಣದಲ್ಲಿ ಪೋಸ್ಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT