ನವದೆಹಲಿ: ಆಂಧ್ರಪ್ರದೇಶದ ₹3,500 ಕೋಟಿ ಮೊತ್ತದ ಮದ್ಯ ಹಗರಣದ ಮೂವರು ಆರೋಪಿಗಳಿಗೆ ನ್ಯಾಯಾಲಯದ ಮುಂದೆ ಶರಣಾಗುವುದರಿಂದ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ರಕ್ಷಣೆ ನೀಡಿದೆ.

ಆಂಧ್ರ ಪ್ರದೇಶ ಹೈಕೋರ್ಟ್ ಈ ಮೂವರ ಜಾಮೀನನ್ನು ರದ್ದು ಮಾಡಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ ಮಾಲ್ಯಾ ಬಾಗ್ಚಿ ಅವರ ಪೀಠ ತಡೆ ನೀಡಿದೆ.

ಪ್ರಕರಣ ಸಂಬಂಧ 10 ದಿನಗಳ ಒಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಪೀಠ ನೋಟಿಸ್ ನೀಡಿತು.

ನ.26ರಂದು ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಮತ್ತು ಅಲ್ಲಿಯೇ ಜಾಮೀನು ಅರ್ಜಿ ಸಲ್ಲಿಸುವಂತೆ ಆಂಧ್ರಪ್ರದೇಶದ ಹೈಕೋರ್ಟ್ ಈ ಮೂವರಿಗೆ ಸೂಚಿಸಿತ್ತು. ‘ಈ ಹಿಂದೆ ಸಲ್ಲಿಸಿದ್ದ ಆರೋಪಪಟ್ಟಿಯನ್ನು ವಿಚಾರಣಾ ನ್ಯಾಯಾಲಯವು ರದ್ದು ಮಾಡಿತ್ತು. ಆದ್ದರಿಂದ ಮತ್ತೊಮ್ಮೆ ಆರೋಪಪಟ್ಟಿ ಸಲ್ಲಿಸುವ ಕೆಲಸ ನಡೆಯುತ್ತಿದೆ’ ಎಂದು ಆಂಧ್ರಪ್ರದೇಶ ಸರ್ಕಾರದ ಪರ ವಾದಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರ ಹೇಳಿದರು.

ಆರೋಪಿಗಳು ಯಾರು?

ಧನಂಜಯ ರೆಡ್ಡಿ– ಇವರು ಮುಖ್ಯಮಂತ್ರಿ ಕಚೇರಿಯಲ್ಲಿ ಕಾರ್ಯದರ್ಶಿಯಾಗಿದ್ದರು.

ಕೃಷ್ಣ ಮೋಹನ್ ರೆಡ್ಡಿ– ಜಗನ್ ಮೋಹನ್ ರೆಡ್ಡಿ ಅವರು ಮುಖ್ಯಮಂತ್ರಿಯಾಗಿದ್ದಾಗ ಇವರು ವಿಶೇಷ ಕರ್ತವ್ಯ ಅಧಿಕಾರಿಯಾಗಿದ್ದರು.

ಬಾಲಾಜಿ ಗೋವಿಂದಪ್ಪ– ಇವರು ಭಾರ್ತಿ ಸಿಮೆಂಟ್ನ ನಿರ್ದೇಶಕರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.