ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಪ್ರದೇಶದ ಕೈಗಾರಿಕಾ ಸಚಿವ ಮೇಕಪಾಟಿ ಗೌತಮ ರೆಡ್ಡಿ ಹೃದಯಾಘಾತದಿಂದ ನಿಧನ

Last Updated 21 ಫೆಬ್ರುವರಿ 2022, 5:54 IST
ಅಕ್ಷರ ಗಾತ್ರ

ಹೈದರಾಬಾದ್: ಆಂಧ್ರ ಪ್ರದೇಶದ ಕೈಗಾರಿಕಾ ಸಚಿವ ಮೇಕಪಾಟಿ ಗೌತಮ ರೆಡ್ಡಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು.

ಸೋಮವಾರ ಬೆಳಗ್ಗೆ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಕೂಡಲೆ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಗೆ ಕರೆತರುವ ಮುನ್ನವೇ ಜೀವ ಹೋಗಿದೆ ಎಂದು ವೈದ್ಯರು ಘೋಷಿಸಿದ್ದಾರೆ.

ಮೃತರ ಕುಟುಂಬಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT