ಅಮರಾವತಿ: ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ವ್ಯಾನ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು, ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಬಲಕೋಟ ಮಂಡಲದ ಚೆನ್ನಮರಿಮಿಟ್ಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಮೃತರು ಮತ್ತು ಗಾಯಗೊಂಡವರು ಕರ್ನಾಟಕದ ಬಾಗೇಪಲ್ಲಿಯವರು ಎನ್ನಲಾಗಿದೆ. ಅವರು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸಾಗುತ್ತಿದ್ದರು.

ಘಟನಾ ಸ್ಥಳದಲ್ಲಿ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಘಟನೆ ಸಂಬಂಧ ಮದನಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.