ಅಮರಾವತಿ: ಆಂಧ್ರ ಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಇಂದು (ಮಂಗಳವಾರ) ಇಬ್ರಾಹಿಂಪಟ್ಟಣಂನಲ್ಲಿರುವ ಮಾಜಿ ಸಚಿವ ಜೋಗಿ ರಮೇಶ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಶೋಧ ನಡೆಸುತ್ತಿದ್ದಾರೆ.
ಅಗ್ರಿಗೋಲ್ಡ್ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಗಿ ರಮೇಶ್ ಅವರ ಪುತ್ರ ರಾಜೀವ್‌ನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ರಾಜೀವ್ ಬಂಧನ ಖಂಡಿಸಿರುವ ಜೋಗಿ ರಮೇಶ್, ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.