ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಕ್ಷಾಂತರ: 8 ಶಾಸಕರನ್ನು ಅನರ್ಹಗೊಳಿಸಿದ ಆಂಧ್ರಪ್ರದೇಶ ವಿಧಾನಸಭೆ ಸ್ಪೀಕರ್

Published 27 ಫೆಬ್ರುವರಿ 2024, 3:16 IST
Last Updated 27 ಫೆಬ್ರುವರಿ 2024, 3:16 IST
ಅಕ್ಷರ ಗಾತ್ರ

ಅಮರಾವತಿ(ಆಂಧ್ರಪ್ರದೇಶ): ಆಂಧ್ರಪ್ರದೇಶ ವಿಧಾನಸಭೆಯ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ಪಕ್ಷಾಂತರಿಗಳ ವಿರುದ್ಧ ನಿರ್ಣಾಯಕ ನಿಲುವನ್ನು ತೆಗೆದುಕೊಂಡಿದ್ದು, 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ.

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಸಲ್ಲಿಸಿದ ಅರ್ಜಿಯ ಮೇರೆಗೆ ಆ ಪಕ್ಷದ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ್ ರೆಡ್ಡಿ, ಕೋಟಂ ರೆಡ್ಡಿ ಶ್ರೀಧರ್ ರೆಡ್ಡಿ ಮತ್ತು ಉಂಡವಳ್ಳಿ ಶ್ರೀದೇವಿಯನ್ನು ಅನರ್ಹಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಅನರ್ಹಗೊಂಡ ಶಾಸಕರು ತಮ್ಮ ಮೂಲ ಪಕ್ಷದಿಂದ ಬೇರೆ ಪಕ್ಷಕ್ಕೆ ತಮ್ಮ ನಿಷ್ಠೆಯನ್ನು ಬದಲಾಯಿಸಿದ್ದಾರೆ, ಇದು ಪ್ರಜಾಪ್ರಭುತ್ವದ ರಚನೆ ಮತ್ತು ಮತದಾರರ ಆದೇಶವನ್ನು ದುರ್ಬಲಗೊಳಿಸುತ್ತದೆ ಎಂದು ಸ್ಪೀಕರ್ ಅಭಿಪ್ರಾಯಪಟ್ಟಿದ್ದಾರೆ.

ಶಾಸಕರ ವಿರುದ್ಧ ವೈಎಸ್‌ಆರ್‌ಸಿಪಿಯ ಅರ್ಜಿಯಲ್ಲಿ ಮಾಡಲಾದ ಆರೋಪಗಳು ಮತ್ತು ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಅನರ್ಹತೆ ನಿರ್ಧಾರಕ್ಕೆ ಬರಲಾಗಿದೆ ಎಂದು ಸಿಎಂಒ ತಿಳಿಸಿದೆ.

ಅನರ್ಹಗೊಂಡ ಸದಸ್ಯರು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಮತ್ತು ಪಕ್ಷದ ತತ್ವಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದಲ್ಲದೆ, ತೆಲುಗು ದೇಶಂ ಪಕ್ಷ (ಟಿಡಿಪಿ) ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಮದ್ದಲಗಿರಿ, ಕರಣಂ ಬಲರಾಮ್, ವಲ್ಲಭನೇನಿ ವಂಶಿ ಮತ್ತು ವಾಸುಪಲ್ಲಿ ಗಣೇಶ್ ಅವರನ್ನು ಅನರ್ಹಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT