ಅಮರಾವತಿ (ಆಂಧ್ರಪ್ರದೇಶ): ರಾಜ್ಯದ ವಿವಿಧ ಸ್ಥಳಗಳಲ್ಲಿರುವ ತಮ್ಮ ಪಕ್ಷದ ಕಚೇರಿಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಬುಧವಾರ ಬಂದ್‌ಗೆ ಕರೆ ನೀಡಿದ್ದ ತೆಲುಗು ದೇಶಂ ಪಕ್ಷದ ಕೆಲವು ನಾಯಕರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದರು.

ಬಂದ್‌ನಲ್ಲಿ ಪಾಲ್ಗೊಳ್ಳದಂತೆ ಪಕ್ಷದ ಹಿರಿಯ ನಾಯಕರನ್ನು ಪೊಲೀಸರು ಗೃಹಬಂಧನದಲ್ಲಿರಿಸಿದರು.

ಬಂದ್‌ಗೆ ಕರೆ ನೀಡಿದ್ದರೂ, ಬಸ್ ಸಂಚಾರ ಸೇವೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ವಿಶಾಖಪಟ್ಟಣದ ಮಂಗಳಗಿರಿ ಸಮೀಪದಲ್ಲಿರುವ ಟಿಡಿಪಿ ಕೇಂದ್ರ ಕಚೇರಿ ಮತ್ತು ಇತರ ಸ್ಥಳಗಳಲ್ಲಿರುವ ಪಕ್ಷಗಳ ಕಚೇರಿ ಮೇಲೆ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಪಕ್ಷದ ವಕ್ತಾರ ಕೆ. ಪಟ್ಟಾಭಿ ರಾಮ್ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು. ಇದೇ ವೇಳೆ ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್ ರೆಡ್ಡಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಟೀಕಿಸಿದ್ದರು.

ತಮ್ಮ ಕಚೇರಿ ಮೇಲಿನ ದಾಳಿಯನ್ನು ಖಂಡಿಸಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು, ರಾಜ್ಯದಾದ್ಯಂತ ಬಂದ್‌ಗೆ ಕರೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.