ಅಮರಾವತಿ: ಆಂಧ್ರಪ್ರದೇಶ ರಾಜ್ಯದಾದ್ಯಂತ 1,036ಕ್ಕೂ ಬಸ್ಗಳನ್ನು ಪರಿಶೀಲಿಸಲಾಗಿದೆ. ಸರಿಯಾದ ದಾಖಲೆಗಳಿಲ್ಲದ 236 ಬಸ್ಗಳಿಗೆ ದಂಡ ವಿಧಿಸಲಾಗಿದೆ ಮತ್ತು ಹಲವು ಪ್ರಕರಣ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಎಂ. ರಾಮಪ್ರಸಾದ್ ಅವರು ಶನಿವಾರ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ‘ಆರು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಸಂಭವಿಸಿದ ನಾಲ್ಕು ಬಸ್ ದುರಂತ ಘಟನೆಗಳಲ್ಲಿ 45 ಮಂದಿ ಸಾವಿಗೀಡಾಗಿದ್ದು ಹಲವರು ಗಾಯಗೊಂಡಿದ್ದಾರೆ. ರಸ್ತೆ ಅಪಘಾತಗಳನ್ನು ತಪ್ಪಿಸಲು ತೀವ್ರ ಕ್ರಮ ಕೈಗೊಳ್ಳುತ್ತಿದ್ದೇವೆ’ ಎಂದಿದ್ದಾರೆ.

‘ಟೋಲ್ ಪ್ಲಾಜಾ ಮತ್ತು ಚೆಕ್ಪೋಸ್ಟ್ ಸೇರಿದಂತೆ 16 ಕಡೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಇನ್ನು ನಿಯಮಿತವಾಗಿ ತಪಾಸಣೆ ನಡೆಸಲಾಗುವುದು ಹಾಗೂ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಮಾರ್ಕಾಪುರಂ ಜಿಲ್ಲೆಯ ರಾಯವರಂ ಸಮೀಪ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ 14 ಪ್ರಯಾಣಿಕರು ಸಜೀವ ದಹನವಾಗಿದ್ದರು. 22 ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.