ನವದೆಹಲಿ: ಪ್ರಸ್ತಾವಿತ ಬೇಡ್ತಿ–ವರದಾ ನದಿಗಳ ಜೋಡಣೆ ವೇಳೆಯಲ್ಲಿ ತಮ್ಮ ರಾಜ್ಯಕ್ಕೆ ನ್ಯಾಯಬದ್ಧವಾದ ನೀರು ಹಂಚಿಕೆ ಮಾಡಬೇಕು ಎಂದು ಆಂಧ್ರ ಪ್ರದೇಶ ಸರ್ಕಾರ ತಗಾದೆ ಎತ್ತಿದೆ.

ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಳಕ್ಕೆ ಅನುವು ಮಾಡಿಕೊಡಬಾರದು ಎಂದು ಆಂಧ್ರ ಪ್ರದೇಶ ಸರ್ಕಾರವು ಜಲಶಕ್ತಿ ಸಚಿವಾಲಯಕ್ಕೆ ಜನವರಿಯಲ್ಲಿ ಪತ್ರ ಬರೆದಿತ್ತು. ಅದರ ಬೆನ್ನಲ್ಲೇ, ನೆರೆ ರಾಜ್ಯವು ನದಿ ಜೋಡಣೆಯ ನೀರು ಹಂಚಿಕೆ ವಿಷಯದಲ್ಲೂ ತಕರಾರು ಶುರು ಮಾಡಿದೆ.

ನದಿ ಜೋಡಣೆಯ ವಿಷಯದಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ತನ್ನ ನಿಲುವನ್ನು ತಿಳಿಸಿರುವ ಆಂಧ್ರ ಪ್ರದೇಶ ಸರ್ಕಾರ, ‘ಈ ನದಿಗಳನ್ನು ಜೋಡಿಸುವ ಮೂಲಕ 18.50 ಟಿಎಂಸಿ ಅಡಿ ನೀರನ್ನು ಕೃಷ್ಣಾ ಜಲಾನಯನ ಪ್ರದೇಶಕ್ಕೆ ತಿರುಗಿಸಲು ಪ್ರಸ್ತಾಪಿಸಲಾಗಿದೆ. ಹೀಗಾಗಿ, ಕೃಷ್ಣಾ ನ್ಯಾಯಮಂಡಳಿ ತೀರ್ಪಿನ ಪ್ರಕಾರ, ರಾಜ್ಯಕ್ಕೆ ಪಾಲು ನೀಡಬೇಕು’ ಎಂದು ಆಗ್ರಹಿಸಿದೆ. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ನದಿ ಜೋಡಣೆಯ ವಿಶೇಷ ಸಮಿತಿಯ ಸಭೆಯಲ್ಲೂ ಈ ಬೇಡಿಕೆ ಮುಂದಿಟ್ಟಿದೆ. ಇನ್ನೊಂದೆಡೆ, ನದಿ ಜೋಡಣೆ ಕುರಿತು ರಾಜ್ಯಗಳು ಒಮ್ಮತಕ್ಕೆ ಬಂದಿಲ್ಲ. ಜತೆಗೆ, ರಾಜ್ಯಕ್ಕೆ ಕನಿಷ್ಠ ಪಾಲು ಹಂಚಿಕೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದ ಅಂತರ್ ರಾಜ್ಯ ವಿವಾದಗಳು ಬಗೆಹರಿದ ಬಳಿಕವಷ್ಟೇ ನದಿಗಳ ಜೋಡಣೆಯ ಒಪ್ಪಂದಕ್ಕೆ ಸಹಿ ಹಾಕುವುದಾಗಿ ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.

ಗೋದಾವರಿ– ಕಾವೇರಿ ನದಿ ಜೋಡಣೆಯ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ಆಕ್ಷೇಪ ವ್ಯಕ್ತಪಡಿಸಿತ್ತು. ರಾಜ್ಯಕ್ಕೆ ಹಂಚಿಕೆ ಮಾಡಿರುವ ನೀರಿನ ಪ್ರಮಾಣ ಭಾರಿ ಕಡಿಮೆ ಇದ್ದು, ಪಾಲು ಹೆಚ್ಚಿಸಿದರೆ ಮಾತ್ರ ಒಪ್ಪಂದಕ್ಕೆ ಸಹಿ ಹಾಕುವುದಾಗಿ ರಾಜ್ಯ ಸರ್ಕಾರ ಸ್ಪಷ್ಟಪಡಿಸಿತ್ತು. ಆ ಬಳಿಕ, ಬೇಡ್ತಿ–ವರದಾ ನದಿಗಳ ಜೋಡಣೆ ಪ್ರಸ್ತಾವವನ್ನು ಈ ಯೋಜನೆಯಲ್ಲಿ ಸೇರಿಸಲಾಗಿತ್ತು.

ಧಾರವಾಡ ಜಿಲ್ಲೆಯಲ್ಲಿ ಉಗಮಗೊಂಡು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಹರಿದು ಅರಬ್ಬಿ ಸಮುದ್ರ ಸೇರುವ ಬೇಡ್ತಿ ನದಿಯನ್ನು ಹಾವೇರಿ ಮತ್ತು ಗದಗ ಜಿಲ್ಲೆಯ ವ್ಯಾಪ್ತಿಗೆ ನೀರು ಪೂರೈಕೆಗೆ ವರದಾ ನದಿಗೆ ಜೋಡಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಹಾವೇರಿ, ಗದಗ, ರಾಯಚೂರು ಜಿಲ್ಲೆ ವ್ಯಾಪ್ತಿಯಲ್ಲಿ ನೀರಾವರಿ, ಕುಡಿಯುವ ನೀರು ಪೂರೈಕೆ, ಕೈಗಾರಿಕೆಗಳಿಗೆ ನೀರು ಒದಗಿಸುವುದು ಈ ಯೋಜನೆಯ ಉದ್ದೇಶ. ನದಿ ನೀರು ಸಂಗ್ರಹಕ್ಕೆ ಶಿರಸಿಯ ಸಹಸ್ರಲಿಂಗ ಮತ್ತು ಪಟ್ಟಣದ ಹೊಳೆ ಬಳಿ ಹಾಗೂ ಯಲ್ಲಾಪುರದ ಬೇಡ್ತಿ ಸೇತುವೆ ಸಮೀಪ ಕಿರು ಅಣೆಕಟ್ಟೆ ನಿರ್ಮಾಣ ಮಾಡಲಾಗುತ್ತದೆ. ಅಲ್ಲಿಂದ 246.58 ಕಿ.ಮೀ ಪೈಪ್ಲೈನ್ ಮೂಲಕ ನೀರುಕೊಂಡೊಯ್ಯಲಾಗುತ್ತದೆ. ಈ ನದಿಗಳ ಜೋಡಣೆಯಿಂದಾಗಿ 1.04 ಲಕ್ಷ ಹೆಕ್ಟೇರ್ಗೆ ನೀರಾವರಿ ಒದಗಿಸಬಹುದು ಎಂದು ಡಿಪಿಆರ್ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.