ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆಗೂ ಮುನ್ನವೇ ನೌಕರರ ತುಟ್ಟಿಭತ್ಯೆ ಬಿಡುಗಡೆಗೆ ಆಂಧ್ರ ಸರ್ಕಾರ ಆದೇಶ

Published 16 ಮಾರ್ಚ್ 2024, 6:06 IST
Last Updated 16 ಮಾರ್ಚ್ 2024, 6:06 IST
ಅಕ್ಷರ ಗಾತ್ರ

ಅಮರಾವತಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುವ ಮುನ್ನವೇ ಬಾಕಿ ಉಳಿಸಿಕೊಂಡಿದ್ದ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಬಿಡುಗಡೆ ಮಾಡಿ ಮುಖ್ಯಮಂತ್ರಿ ಜಗನ್ ಮೋಹನ್‌ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

2019ರ ಜುಲೈ 1ರಿಂದ 2021ರ ಡಿಸೆಂಬರ್ 31ರ ವರೆಗೆ ಬಾಕಿ ಉಳಿಸಿಕೊಂಡಿದ್ದ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಿರುವುದಾಗಿ ವಿಶೇಷ ಮುಖ್ಯ ಕಾರ್ಯದರ್ಶಿ (ಹಣಕಾಸು) ಶಂಶೇರ್ ಸಿಂಗ್ ರಾವುತ್‌ ತಿಳಿಸಿದ್ದಾರೆ.

2022ರ ಜುಲೈ 1ರಿಂದ ಜಾರಿಗೆ ಬರುವಂತೆ ಮೂಲ ವೇತನ ಶೇ.22.75 ರಿಂದ ಶೇ 26.39ಕ್ಕೆ ಹೆಚ್ಚಿಸಿ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಲಾಗುವುದು. ಇದು ನಿವೃತ್ತ ನೌಕರರು, ಕುಟುಂಬ, ಪಿಂಚಣಿ ಪಡೆಯುತ್ತಿರುವವರಿಗೂ ಈ ಹೆಚ್ಚಳ ಅನ್ವಯವಾಗಲಿದೆ ಎಂದು ರಾವುತ್‌ ಹೇಳಿದ್ದಾರೆ.

2023ರ ಜನವರಿ 1ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ 26.39ರಿಂದ ಶೇ 30.03ಕ್ಕೆ ತುಟ್ಟಿಭತ್ಯೆಯನ್ನು ಪರಿಷ್ಕರಿಸಲಾಗುವುದು ಎಂದು ಹೇಳಿದ್ದಾರೆ.

2023ರ ಜನವರಿ 1ರಿಂದ ಅನ್ವಯವಾಗುವಂತೆ 2006ರ ಪರಿಷ್ಕೃತ ಯುಜಿಸಿ ವೇತನ ಶ್ರೇಣಿಯನ್ನು ಶೇ 212ರಿಂದ ಶೇ 221ಕ್ಕೆ ಮೂಲ ವೇತನವನ್ನು ಪಡೆಯುವ ನೌಕರರಿಗೆ ಸಂಬಂಧಿಸಿದಂತೆ ತುಟ್ಟಿಭತ್ಯೆ ದರಗಳನ್ನು ಪರಿಷ್ಕರಿಸಲಾಗುವುದು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT