ಹೈದರಾಬಾದ್: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಗ್ರಾಮವೊಂದರಲ್ಲಿ ಜುಲೈನಿಂದ ಸಪ್ಟೆಂಬರ್ 3ರವರೆಗೆ ನಿಗೂಢ ಆರೋಗ್ಯ ಸಮಸ್ಯೆಗಳಿಂದಾಗಿ 23 ಮಂದಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

1200 ಜನರು ವಾಸಿಸುತ್ತಿರುವ ಪುಟ್ಟ ಗ್ರಾಮ ತುರಕಪಲೆಂನಲ್ಲಿನ ಪರಿಸ್ಥಿತಿ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಮೃತರಲ್ಲಿ ಬಹುತೇಕರು 55 ವಯಸ್ಸಿನವರಾಗಿದ್ದರು. ಆರಂಭದಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ಬಳಿಕ ಅಂಗಾಂಗ ವೈಫಲ್ಯಗೊಂಡು ಕೆಲವೇ ದಿನಗಳಲ್ಲಿ ಮೃತಪಟ್ಟಿದ್ದಾರೆ. ಬ್ಯಾಕ್ಟೀರಿಯ ಸೋಂಕಿನಿಂದಾಗಿ ಕೆಲವರು ಮೃತಪಟ್ಟಿರಬಹುದು ಎಂದು ಆರೋಗ್ಯಾಧಿಕಾರಿಗಳು ಶಂಕಿಸಿದ್ದಾರೆ.

ಮೃತರಲ್ಲಿ ಶೇ 80ರಷ್ಟು ಜನ ಮಧುಮೇಹ, ಅಧಿಕ ರಕ್ತದೊತ್ತಡ, ಮೂತ್ರಪಿಂಡದ ಸಮಸ್ಯೆಯನ್ನು ಹೊಂದಿದ್ದರು ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ತಿಳಿದುಬಂದಿದೆ. ‘ಶನಿವಾರ ರಕ್ತಪರೀಕ್ಷೆಯ ವರದಿಯು ಬರಲಿದ್ದು, ಆ ಬಳಿಕ ಸಾವಿನ ಕಾರಣಗಳು ತಿಳಿದುಬರಲಿದೆ’ ಎಂದು ವೈದ್ಯಕೀಯ ಶಿಕ್ಷಣ ನಿರ್ದೇಶಕ ಡಾ. ರಘುನಂದನ್ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.