ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಬಾಬು ನಾಯ್ಡು ಅವರಿಗೆ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ನಕಾರ

Published 19 ಅಕ್ಟೋಬರ್ 2023, 12:45 IST
Last Updated 19 ಅಕ್ಟೋಬರ್ 2023, 12:45 IST
ಅಕ್ಷರ ಗಾತ್ರ

ಅಮರಾವತಿ: ಕೌಶಲ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರಿಗೆ ಮಧ್ಯಂತರ ಜಾಮೀನು ನೀಡಲು ಆಂಧ್ರಪ್ರದೇಶ ಹೈಕೋರ್ಟ್ ಗುರುವಾರ ನಿರಾಕರಿಸಿದೆ. 

ಇದೇ ಪ್ರಕರಣಕ್ಕೆ ಸಂಬಂಧಿಸಿದ ನಾಯ್ಡು ಅವರ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಇರುವ ಕಾರಣ ಹೈಕೋರ್ಟ್ ಈ ನಿರ್ಧಾರ ಕೈಗೊಂಡಿದೆ. ಆದರೆ, ನಾಯ್ಡು ತಮ್ಮ ಆರೋಗ್ಯ ತಪಾಸಣೆಗಾಗಿ ವೈದ್ಯರನ್ನು ಭೇಟಿಯಾಗಲು ಅವಕಾಶ ನೀಡುವ ಬಗ್ಗೆಯೂ ನ್ಯಾಯಾಲಯ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. 

ಈ ಮಧ್ಯೆ, ವಿಜಯವಾಡದ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ನ್ಯಾಯಾಲಯವು, ನಾಯ್ಡು ಅವರ ನ್ಯಾಯಾಂಗ ಬಂಧನವನ್ನು ನವೆಂಬರ್ 1ರವರೆಗೆ ವಿಸ್ತರಿಸಿದೆ. ಮಾಜಿ ಮುಖ್ಯಮಂತ್ರಿ ನಾಯ್ಡು ಅವರನ್ನು ಆನ್‌ಲೈನ್ ಮೂಲಕ ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶೆ ಬಿ.ಎಸ್.ವಿ. ಬಿಂದು ನಾಯ್ಡು ಅವರ ಆರೋಗ್ಯವನ್ನು ವಿಚಾರಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT