ಚೆರುಕ್ವಾಡಾ (ಆಂಧ್ರ ಪ್ರದೇಶ): ಆಂಧ್ರ ವಿಧಾನ ಪರಿಷತ್ ಸದಸ್ಯ ಶೇಖ್ ಸಾಬ್ಜಿ (57) ಅವರು ಕಾರು ಅಪಘಾತದಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ.

ಭೀಮಾವರಮ್‌ನಿಂದ ಎಲ್ಲೂರು ಕಡೆ ಸಾಬ್ಜಿ ಪ್ರಯಾಣಿಸುತ್ತಿದ್ದರು. ಮಧ್ಯಾಹ್ನ 12.30ರ ಹೊತ್ತಿಗೆ ಗೋದಾವರಿ ಜಿಲ್ಲೆಯ ಚೆರುಕ್ವಾಡಾ ಗ್ರಾಮದ ಬಳಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

‘ಎದುರಿನಿಂದ ಬರುತ್ತಿದ್ದ ಕಾರು ಅಡ್ಡಾದಿಡ್ಡಿಯಾಗಿ ಚಲಿಸುತ್ತಿತ್ತು. ಅಪಘಾತದಲ್ಲಿ ಸಾಬ್ಜಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ’ ಎಂದು ಪಶ್ಚಿಮ ಗೋದಾವರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಯು. ರವಿ ಪ್ರಕಾಶ್ ತಿಳಿಸಿದ್ದಾರೆ.

ಶಿಕ್ಷಕರಾಗಿದ್ದ ಸಾಬ್ಜಿ ಅವರು ಶಿಕ್ಷಕರ ಕ್ಷೇತ್ರದಿಂದ ಗೆಲುವು ದಾಖಲಿಸಿ ವಿಧಾನ ಪರಿಷತ್ ಪ್ರವೇಶಿಸಿದ್ದರು. ಇವರ ಅವಧಿ 2027ರವರೆಗೂ ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.