ಅಮರಾವತಿ: ಇತ್ತೀಚಿಗೆ ಸುರಿದ ಭಾರಿ ಮಳೆಗೆ ಹಾನಿಗೊಳಗಾದ ಈರುಳ್ಳಿ ಬೆಳೆಯ ಬೆಳೆಗಾರರಿಗೆ ಆಂಧ್ರಪ್ರದೇಶ ಸರ್ಕಾರ ಭರ್ಜರಿ ಪರಿಹಾರ ಘೋಷಿಸಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಶನಿವಾರ ಈರುಳ್ಳಿ ಬೆಳೆಗಾರರಿಗೆ ಬೆಳೆಹಾನಿ ಪರಿಹಾರ ಘೋಷಿಸಿದ್ದಾರೆ.

ಹಾನಿಗೊಳಗಾದ ಪ್ರತಿ ಹೆಕ್ಟೇರ್ಗೆ ₹50,000 ಪರಿಹಾರ ನೀಡುವುದಾಗಿ ನಾಯ್ಡು ಟ್ವೀಟ್ ಮೂಲಕ ಘೋಷಿಸಿದ್ದಾರೆ. ಆಂಧ್ರದಲ್ಲಿ ಈ ಸಾರಿಯ ಮಳೆಗೆ ಸುಮಾರು 45,000 ಎಕರೆ ಈರುಳ್ಳಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಈರುಳ್ಳಿ ಬೆಳೆ ಚೆನ್ನಾಗಿ ಬಂದಿದ್ದ ಸಮಯದಲ್ಲಿಯೇ ನಷ್ಟ ಅನುಭವಿಸಿದ ರೈತರನ್ನು ಬೆಂಬಲಿಸಲು ನಮ್ಮ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಈ ಕ್ರಮವು ರಾಜ್ಯದ ಹಣಕಾಸಿನ ಪರಿಸ್ಥಿತಿ ಮೇಲೆ ಆರ್ಥಿಕ ಹೊರೆಯನ್ನುಂಟು ಮಾಡುತ್ತದೆ ಎಂದು ಹೇಳಿರುವ ಅವರು, ರೈತರ ಕಲ್ಯಾಣದ ಹಿತದೃಷ್ಟಿಯಿಂದ ನಮ್ಮ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.