ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಪ್ರದೇಶ ರೈಲು ಅಪ‍ಘಾತ: 8 ಸಾವು, 32 ಮಂದಿಗೆ ಗಾಯ

Published 29 ಅಕ್ಟೋಬರ್ 2023, 21:04 IST
Last Updated 29 ಅಕ್ಟೋಬರ್ 2023, 21:04 IST
ಅಕ್ಷರ ಗಾತ್ರ

ವಿಜಯನಗರ: ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ, ರೈಲೊಂದು ಹಳಿ ತಪ್ಪಿದ್ದರಿಂದ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. 32ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಂಭವ ಇದೆ ಎಂದು ಮೂಲಗಳು ಹೇಳಿವೆ. ತಾಂತ್ರಿಕ ಕಾರಣದಿಂದಾಗಿ ನಿಲುಗಡೆಗೊಂಡಿದ್ದ ವಿಶಾಖಪಟ್ಟಣ–ರಾಯಗಢ ಪ್ರಯಾಣಿಕ ರೈಲಿಗೆ ವಿಶಾಖಪಟ್ಟಣ–ಪಲಾಸ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಾಯಗಢ ರೈಲಿನ ಹಿಂಬದಿಯ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ಈಸ್ಟ್‌ ಕೋಸ್ಟ್‌ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT