ಅಮರಾವತಿ: ಆಂಧ್ರಪ್ರದೇಶದಲ್ಲಿ ಶುಕ್ರವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಕಡಪಾ, ಅನಂತಪುರ ಹಾಗೂ ಚಿತ್ತೂರು ಜಿಲ್ಲೆಗಳಲ್ಲಿ ಈವರೆಗೆ 25 ಜನರು ಮೃತಪಟ್ಟಿದ್ದು, ಇನ್ನೂ 17 ಜನರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಕಡಪಾ ಜಿಲ್ಲೆಯ ಚೆಯ್ಯೇರು ನದಿಯಲ್ಲಿ ಶುಕ್ರವಾರ ದಿಢೀರ್ ಉಂಟಾದ ಪ್ರವಾಹದಲ್ಲಿ 30ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದರು. ಅನಂತಪುರದ ಕದಿರಿ ಪಟ್ಟಣದಲ್ಲಿ ಮಳೆಯ ಹೊಡೆತಕ್ಕೆ ನಿರ್ಮಾಣ ಹಂತದ ಕಟ್ಟಡವೊಂದು ಪಕ್ಕದ ಕಟ್ಟಡದ ಮೇಲೆ ಕುಸಿದಿದ್ದು, ಇಬ್ಬರು ಮಕ್ಕಳು ಸೇರಿ ಆರು ಜನರುಮೃತಪಟ್ಟಿದ್ದಾರೆ.

ವೈಮಾನಿಕ ಸಮೀಕ್ಷೆ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್ ರೆಡ್ಡಿ ಅವರು ಪ್ರವಾಹಪೀಡಿತ ಪ್ರದೇಶಗಳಲ್ಲಿ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಮೃತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಘೋಷಿಸಲಾಗಿದೆ.

ನೆಲ್ಲೂರು ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗುತ್ತಿದ್ದು, ಪೆನ್ನಾರ್ ನದಿಯು ಹಲವು ಗ್ರಾಮಗಳನ್ನು ಜಲಾವೃತ ಮಾಡಿದೆ. ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ.

ತಮಿಳುನಾಡಿನಲ್ಲಿ ಶೇ 68ರಷ್ಟು ಅಧಿಕ ಮಳೆ: ತಮಿಳುನಾಡಿನಲ್ಲಿ ಅಬ್ಬರದ ಹಿಂಗಾರು ಮಳೆಯಾಗಿದ್ದು, ವಾಡಿಕೆಗಿಂತ ಶೇ 68ರಷ್ಟು ಹೆಚ್ಚು ಮಳೆ ಸುರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಜಾನುವಾರುಗಳು ಸಾವಿಗೀಡಾಗಿವೆ.

ಸಹಜಸ್ಥಿತಿಗೆ ಶಬರಿಮಲೆ ಯಾತ್ರೆ: ಕೇರಳದಪತ್ತಣಂತಿಟ್ಟಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು ಶಬರಿಮಲೆ ಯಾತ್ರೆ ಸಹಜಸ್ಥಿತಿಗೆ ಮರಳಿದೆ. ಭಕ್ತರಿಗೆ ಶಬರಿಮಲೆಗೆ ಪಾದಯಾತ್ರೆ ತೆರಳಲು ಶನಿವಾರ ಮಧ್ಯಾಹ್ನದ ಬಳಿಕ ಅನುಮತಿ ನೀಡಲಾಗಿದೆ.ಸತತ ಮಳೆಯಿಂದ ಪಂಬಾ ನದಿಯಲ್ಲಿ ನೀರಿನ ಹರಿವು ಹೆಚ್ಚಿತ್ತು. ಹೀಗಾಗಿ ಶನಿವಾರದ ಶಬರಿಮಲೆ ಪಾದಯಾತ್ರೆಯನ್ನು ನಿರ್ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.