ಅಮರಾವತಿ: ಆಂಧ್ರಪ್ರದೇಶ ಸರ್ಕಾರವು ಕರ್ಫ್ಯೂ ನಿಯಮಗಳನ್ನು ಸಡಿಲಗೊಳಿಸಲು ಸೋಮವಾರ ನಿರ್ಧರಿಸಿದ್ದು ಜುಲೈ 8ರಿಂದ ಚಿತ್ರ ಮಂದಿರಗಳು, ಜಿಮ್‌ಗಳು, ರೆಸ್ಟೋರೆಂಟ್ ಮತ್ತು ಕಲ್ಯಾಣ ಮಂಟಪಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದ ಕಾರಣ ಸರ್ಕಾರ ಈ ಕ್ರಮಕೈಗೊಂಡಿದೆ.

ಪೂರ್ವ ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿ ಕೋವಿಡ್ ದೃಢ ಪ್ರಮಾಣವು ಶೇಕಡ 5ಕ್ಕಿಂತ ಹೆಚ್ಚಿದೆ. ಈ ಎರಡು ಜಿಲ್ಲೆಗಳಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 7ರ ತನಕ ಕರ್ಫ್ಯೂ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಇನ್ನುಳಿದ 11 ಜಿಲ್ಲೆಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆ ತನಕ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ.

ಈ 11 ಜಿಲ್ಲೆಗಳಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 9ರ ತನಕ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಆದರೆ ಗೋದಾವರಿ ಜಿಲ್ಲೆಗಳಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6ರ ತನಕ ಮಾತ್ರ ಅವಕಾಶ ಕಲ್ಪಿಸಲಾಗಿದೆ.

‘ಈ ಹೊಸ ನಿಯಮವು ಜುಲೈ 8ರಿಂದ ಜಾರಿಗೆ ಬರಲಿದೆ’ ಎಂದು ಮುಖ್ಯ ಮಂತ್ರಿ ಕಚೇರಿ ಹೇಳಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್‌ಮೋಹನ್ ರೆಡ್ಡಿ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕರ್ಫ್ಯೂ ನಿಯಮ ಸಡಿಲಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

‘ಚಿತ್ರ ಮಂದಿರಗಳು ಪರ್ಯಾಯ ಆಸನ ವ್ಯವಸ್ಥೆಗಳೊಂದಿಗೆ ಕಾರ್ಯ ನಿರ್ವಹಿಸಬಹುದು. ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಪಾಡುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.