ನವದೆಹಲಿ: 'ಪೋಷಣ್' ಅಭಿಯಾನದಡಿಯಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶುಕ್ರವಾರ ತಿಳಿಸಿದೆ.

ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಗೆ ಉತ್ತರ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ರಾಜ್ಯ ಖಾತೆ ಸಚಿವೆ ಸಾವಿತ್ರಿ ಠಾಕೂರ್, ಅಂಗನವಾಡಿ ಕಾರ್ಯಕರ್ತೆಯರು ‘ಗೌರವ ಕಾರ್ಯಕರ್ತೆಯರು’. ಅವರು ಸ್ವಯಂ ಪ್ರೇರಣೆಯಿಂದ ತಮ್ಮ ಸ್ಥಳೀಯ ಸಮುದಾಯಗಳಲ್ಲಿ ಮಕ್ಕಳ ಕಲ್ಯಾಣ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ನೀಡಲಾಗುತ್ತಿದ್ದು, 2018ರ ಅಕ್ಟೋಬರ್ 1ರಂದು ಪರಿಷ್ಕರಿಸಲಾಗಿತ್ತು. ಪ್ರಸ್ತುತ ಸಾಮಾನ್ಯ ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ ₹4,500 ಮತ್ತು ಮಿನಿ ಅಂಗನವಾಡಿ ಕಾರ್ಯತಕರ್ತೆಯರಿಗೆ ₹3,500 ಮತ್ತು ಸಹಾಯಕಿಯರಿಗೆ 2,250 ವೇತನವಿದೆ. ಜೊತೆಗೆ ಕಾರ್ಯಕ್ಷಮತೆ ಆಧಾರಿಸಿ ಕಾರ್ಯಕರ್ತೆಯರಿಗೆ ₹500 ಮತ್ತು ಸಹಾಯಕಿಯರಿಗೆ ₹250 ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.