ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್ ಕಂಪನಿಗಳ ವಿರುದ್ಧದ ಹಣದ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಪ್ರಶ್ನಿಸಿದೆ.

ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ರಾಣಾ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಕಪೂರ್ ಮತ್ತು ಅನಿಲ್ ಅಂಬಾನಿ ನಡುವೆ ಸಂಶಯಾಸ್ಪದ ವಹಿವಾಟು ನಡೆದಿದೆ ಎಂದು ಇ.ಡಿ ಅಧಿಕಾರಿಗಳು ಶಂಕಿಸಿದ್ದಾರೆ.

ಜಾರಿ ನಿರ್ದೇಶನಾಲಯದ ವಿಚಾರಣೆ ಮತ್ತು ಸಂಬಂಧಿತ ಆರೋಪಗಳ ಬಗ್ಗೆ ರಾಣಾ ಅಥವಾ ಅವರ ವಕೀಲರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಿಯಮಾವಳಿಗಳನ್ನು ಉಲ್ಲಂಘಿಸಿ ಯೆಸ್ ಬ್ಯಾಂಕ್ನಿಂದ ಸಾಲ ನೀಡಿದ ಪ್ರಕರಣಗಳಲ್ಲಿ ಹಣ ಅಕ್ರಮ ವರ್ಗಾವಣೆ ನಡೆದಿದೆ ಎಂಬ ಆರೋಪಗಳಡಿ ಈ ಹಿಂದೆ ಸಹ ಕಪೂರ್ ಅವರನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.