ಮಹಾಕುಂಭ ನಗರ(ಪ್ರಯಾಗರಾಜ್): ಮಾಘ ಪೂರ್ಣಿಮೆ ದಿನವಾದ ಇಂದು(ಬುಧವಾರ) ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಮತ್ತು ಅವರ ಪತ್ನಿ ಚೇತನಾ ರಾಮತೀರ್ಥ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

ಮಂಗಳವಾರ ಪ್ರಯಾಗರಾಜ್ಗೆ ಆಗಮಿಸಿದ್ದ ಕುಂಬ್ಳೆ ದಂಪತಿ ಬುಧವಾರ ಪುಣ್ಯ ಸ್ನಾನ ಮಾಡಿದ್ದಾರೆ. ವಿಐಪಿಗಳಿದ್ದ ವಿಶೇಷ ಸವಲತ್ತುಗಳನ್ನು ನಿರಾಕರಿಸಿದ್ದ ಅವರು ಸಾಮಾನ್ಯ ಯಾತ್ರಿಕರಂತೆ ದೋಣಿಯಲ್ಲಿ ಪ್ರಯಾಣಿಸಿ ಸಂಗಮಕ್ಕೆ ತೆರಳಿದ್ದಾರೆ.

ಇದಕ್ಕೂ ಮೊದಲು ಸೈನಾ ನೆಹ್ವಾಲ್, ಸುರೇಶ್ ರೈನಾ, ದಿ ಗ್ರೇಟ್ ಖಲಿ, ಮೊಹಮ್ಮದ್ ಕೈಫ್ ಸೇರಿದಂತೆ ಹಲವು ಕ್ರೀಡಾಪಟುಗಳು ಮಹಾ ಕುಂಭಮೇಳಕ್ಕೆ ತೆರಳಿ ಪುಣ್ಯ ಸ್ನಾನ ಮಾಡಿದ್ದಾರೆ.

ಏತನ್ಮಧ್ಯೆ, ಮಾಘ ಪೂರ್ಣಿಮೆಯ ಸಂದರ್ಭ ಸುಮಾರು 2 ಕೋಟಿಗೂ ಹೆಚ್ಚು ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

ಜನವರಿ 13 ಮಹಾ ಕುಂಭಮೇಳ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಸುಮಾರು 47 ಕೋಟಿಗೂ ಹೆಚ್ಚು ಜನರು ಸಂಗಮದಲ್ಲಿ ಮಿಂದೆದ್ದಿದ್ದಾರೆ. ಫೆಬ್ರುವರಿ 26ಕ್ಕೆ ಮಹಾ ಕುಂಭಮೇಳ ಮುಕ್ತಾಯಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.