ಹೈದರಾಬಾದ್: ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಅವರು ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷರಾಗಿ ನೇಮಕವಾಗಿರುವುದನ್ನು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ.
ತೆಲಂಗಾಣದ ಸಿರಿಲಿಂಗಂಪಲ್ಲಿ ಕ್ಷೇತ್ರದಲ್ಲಿ ಬಿಜೆಪಿಯ ಪರ ಪ್ರಚಾರ ನಡೆಸಿದ ಅಣ್ಣಾಮಲೈ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ‘ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗನೇ ಇರಬಹುದು ಆದರೆ ಅವರು ಪಕ್ಷದ ಕಾರ್ಯಕರ್ತರ ವಿಶ್ವಾಸ ಗಳಿಸಿದ್ದಾರೆ. ಅವರು ದೀರ್ಘಕಾಲದವರೆಗೆ ಪಕ್ಷದ ಯುವಮೋರ್ಚಾದ ನಾಯಕರಾಗಿದ್ದರು’ ಎಂದರು.
ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪರಿವಾರವಾದ ಯಾವ ರೀತಿಯಲ್ಲಿದೆ ಎಂದರೆ, ಒಂದೇ ಕುಟುಂಬದ ಹಲವರು ಸರ್ಕಾರದ ಪ್ರಭಾವಿ ಹುದ್ದೆಗಳನ್ನು ಅಲಂಕರಿಸುತ್ತಾರೆ. ಆದರೆ ವಿಜಯೇಂದ್ರ ಅವರು ದೀರ್ಘ ಸಮಯದವರೆಗೆ ಪಕ್ಷಕ್ಕಾಗಿ ದುಡಿದಿದ್ದಾರೆ. ಹಾಗಾಗಿ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ. ಅದು ಕೂಡಾ ಪ್ರಜಾಪ್ರಭುತ್ವದ ಮಾದರಿಯಲ್ಲಿ ಆಯ್ಕೆ ಆಗಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.