ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: 3 ವಾರಗಳಲ್ಲಿ 13ನೇ ದುರ್ಘಟನೆ

Published 10 ಜುಲೈ 2024, 10:57 IST
Last Updated 10 ಜುಲೈ 2024, 10:57 IST
ಅಕ್ಷರ ಗಾತ್ರ

ಸಹರ್ಸಾ: ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ಇಂದು (ಬುಧವಾರ) ಮತ್ತೊಂದು ಸೇತುವೆ ಕುಸಿದಿದೆ. ಈ ಮೂಲಕ 3 ವಾರಗಳಲ್ಲಿ ರಾಜ್ಯದಲ್ಲಿ ನಡೆದ 13ನೇ ದುರ್ಘಟನೆ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೊಂದು ಕಿರು ಸೇತುವೆ ಆಗಿದ್ದು, ಸುತ್ತಮುತ್ತಲಿನ ಹಳ್ಳಿಗಳೊಂದಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ (ಸಹರ್ಸಾ) ಜ್ಯೋತಿ ಕುಮಾರ್ ಹೇಳಿದ್ದಾರೆ.

ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚೆಗೆ ಸೇತುವೆ ಕುಸಿತದ ಸರಣಿ ಘಟನೆಗಳು ಸಂಭವಿಸಿದ್ದು, ಬಿಹಾರ ಸರ್ಕಾರ 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ.

ರಾಜ್ಯದ ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆ ನಡೆಸಿ, ತಕ್ಷಣ ದುರಸ್ತಿ ಮಾಡಬೇಕಾದ ಸೇತುವೆಗಳನ್ನು ಗುರುತಿಸುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಿಗಳಿಗೆ ಕಳೆದ ವಾರ ಸೂಚನೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT