ಪುದುಚೇರಿ: ಪುದುಚೇರಿಯಲ್ಲಿ ಮತ್ತೊಂದು ಮಗುವಿಗೆ ಹ್ಯೂಮನ್ ಮೆಟಾನ್ಯೂಮೋವೈರಸ್ (ಎಚ್ಎಂಪಿವಿ) ಸೋಂಕು ದೃಢಪಟ್ಟಿದ್ದು, ಜವಾಹರ್ಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರದಲ್ಲಿ (ಜಿಪ್ಮರ್) ಚಿಕಿತ್ಸೆ ಪಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ನೆಗಡಿ, ಕೆಮ್ಮು ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹೆಣ್ಣು ಮಗುವನ್ನು ಈಚೆಗೆ ಜಿಪ್ಮರ್ಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಮಗುವಿಗೆ ಎಚ್ಎಂಪಿವಿ ಸೋಂಕು ಇರುವುದು ದೃಢಪಟ್ಟಿದೆ’ ಎಂದು ಪುದುಚೇರಿಯ ಆರೋಗ್ಯ ಇಲಾಖೆ ನಿರ್ದೇಶಕ ವಿ. ರವಿಚಂದ್ರನ್ ತಿಳಿಸಿದ್ದಾರೆ.

ಸದ್ಯ ಮಗು ಚೇತರಿಸಿಕೊಳ್ಳುತ್ತಿದ್ದು, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಪುದುಚೇರಿಯಲ್ಲಿ ಕಳೆದ ವಾರ ಮೂರು ವರ್ಷದ ಹೆಣ್ಣು ಮಗುವಿಗೆ ಎಚ್ಎಂಪಿವಿ ಸೋಂಕು ಇರುವುದು ಪತ್ತೆಯಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಮಗುವನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚೀನಾದಲ್ಲಿ ಎಚ್ಎಂಪಿವಿ ಪ್ರಕರಣಗಳ ಏರಿಕೆಯಾಗಿರುವ ಬೆನ್ನಲ್ಲೇ ಕರ್ನಾಟಕ, ತಮಿಳುನಾಡು, ಗುಜರಾತ್, ರಾಜಸ್ಥಾನ, ಪುದುಚೇರಿ ಸೇರಿದಂತೆ ವಿವಿಧ ರಾಜ್ಯದಲ್ಲಿ ಎಚ್ಎಂಪಿವಿ ಪ್ರಕರಣಗಳು ದೃಢಪಟ್ಟಿವೆ.
.Explainer: HMPV ಎಂದರೇನು? ರೋಗಲಕ್ಷಣ, ತಡೆ, ಚಿಕಿತ್ಸೆ.. ಇಲ್ಲಿದೆ ಮಾಹಿತಿ.ಚೀನಾ | hMPV ಸೋಂಕಿನ ತೀವ್ರತೆ ಕ್ಷೀಣ; ಮುಂದುವರಿದ ಶ್ವಾಸಕೋಶ ಸಂಬಂಧಿತ ಸಮಸ್ಯೆ.9 ತಿಂಗಳ ಮಗುವಿನಲ್ಲಿ HMPV ದೃಢ: ಗುಜರಾತ್ನಲ್ಲಿ ಪ್ರಕರಣಗಳ ಸಂಖ್ಯೆ 4ಕ್ಕೇರಿಕೆ.HMPV ಸೋಂಕು: ಹೆಚ್ಚಿನ ನಿಗಾ ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.