ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೇರಳದಲ್ಲಿ ಮತ್ತೊಂದು ಎಂಪಾಕ್ಸ್ ಪ್ರಕರಣ ಪತ್ತೆ

Published : 27 ಸೆಪ್ಟೆಂಬರ್ 2024, 12:42 IST
Last Updated : 27 ಸೆಪ್ಟೆಂಬರ್ 2024, 12:42 IST
ಫಾಲೋ ಮಾಡಿ
Comments

ತಿರುವನಂತಪುರ(ಕೇರಳ): ರಾಜ್ಯದಲ್ಲಿ ಮತ್ತೊಂದು ಎಂಪಾಕ್ಸ್ ಪ್ರಕರಣ ವರದಿಯಾಗಿದೆ ಎಂದು ಕೇರಳ ಆರೋಗ್ಯ ಇಲಾಖೆ ಶುಕ್ರವಾರ ತಿಳಿಸಿದೆ. ರೋಗಲಕ್ಷಣಗಳನ್ನು ಹೊಂದಿರುವವರು ಚಿಕಿತ್ಸೆ ಪಡೆಯುವಂತೆಯೂ ಇಲಾಖೆ ಮನವಿ ಮಾಡಿದೆ.

ಸೆ.18ರಂದು ರಾಜ್ಯದ ವ್ಯಕ್ತಿಯೊಬ್ಬರಿಗೆ ಎಂಪಾಕ್ಸ್‌ ಇರುವುದು ದೃಢಪಟ್ಟಿತ್ತು. ಪರಿಸ್ಥಿತಿಯನ್ನು ಅವಲೋಕಿಸಲು ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಲಾಯಿತು ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ರೋಗಿಯ ಸಂಪರ್ಕ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ವಿದೇಶದಿಂದ ರಾಜ್ಯಕ್ಕೆ ಬಂದ ಪ್ರತಿಯೊಬ್ಬರು ಯಾವುದೇ ರೋಗಲಕ್ಷಣಗಳು ಕಂಡುಬಂದಲ್ಲಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವಂತೆ ಅವರು ಮನವಿ ಮಾಡಿದ್ದಾರೆ.

ಕೊಲ್ಲಿ ರಾಷ್ಟ್ರದಿಂದ ಹಿಂತಿರುಗಿದ ಮಲಪ್ಪುರ ಜಿಲ್ಲೆಯ 38 ವರ್ಷದ ವ್ಯಕ್ತಿಯೊಬ್ಬರಿಗೆ ಎಂಪಾಕ್ಸ್‌ ಇರುವುದು ಸೆ.18ರಂದು ದೃಢಪಟ್ಟಿತ್ತು. ಅವರಲ್ಲಿ ಸೋಂಕಿಗೆ ಕಾರಣವಾಗಿರುವುದು ಎಂಪಾಕ್ಸ್‌ ಕ್ಲಾಡ್‌1 ತಳಿ ಎಂಬುದು ಪರೀಕ್ಷೆಯಲ್ಲಿ ಖಚಿತವಾಗಿದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT