ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್: ಪೊಲೀಸರಿಂದ ಭಯೋತ್ಪಾದಕ ಸಂಚು ವಿಫಲ

Published 14 ಆಗಸ್ಟ್ 2023, 16:07 IST
Last Updated 14 ಆಗಸ್ಟ್ 2023, 16:07 IST
ಅಕ್ಷರ ಗಾತ್ರ

ಚಂಡೀಗಢ: ಸ್ವಾತಂತ್ರ್ಯ ದಿನದ ಮುನ್ನಾದಿನವಾದ ಸೋಮವಾರ ಪಂಜಾಬ್‌ ಪೊಲೀಸರು ಭಯೋತ್ಪಾದಕರ ಸಂಚನ್ನು ವಿಫಲಗೊಳಿಸಿದ್ದು ಈ ಸಂಬಂಧ ಐವರನ್ನು ಬಂಧಿಸಿದ್ದಾರೆ.

ಆರೋಪಿಗಳು ಪಾಕಿಸ್ತಾನ ಮೂಲದ ಉಗ್ರ ಹರ್ವಿಂದರ್‌ ರಿಂದಾ ಮತ್ತು ಅಮೆರಿಕ ಮೂಲದ ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾಬ್‌ ಅವರ ಜೊತೆ ಸಂಪರ್ಕ ಹೊಂದಿದ್ದಾರೆ. ರಾಜ್ಯದಲ್ಲಿ ನಿರ್ದಿಷ್ಟ ಗುಂಪನ್ನು ಗುರಿಯಾಗಿಸಿಕೊಂಡು ಹತ್ಯೆಗೈಯಲು ಅವರು ಸಂಚು ರೂಪಿಸಿದ್ದರು ಎಂದು ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ಗೌರವ್‌ ಯಾದವ್‌ ಅವರು ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ (ಟ್ವಿಟರ್‌) ವೇದಿಕೆಯಲ್ಲಿ ಮಾಹಿತಿ ನೀಡಿರುವ ಅವರು, ಕೇಂದ್ರೀಯ ಸಂಸ್ಥೆ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದ ಪಂಜಾಬ್‌ ಪೊಲೀಸರು ಭಯೋತ್ಪಾದಕ ಸಂಚನ್ನು ಭೇದಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ಧವನ್ನು ಹಾಳುಗೆಡವಲು ರೂಪಿಸಿದ್ದ ಸಂಚು ವಿಫಲಗೊಳಿಸಿದ್ದಾರೆ. ಬಂಧಿತರಿಂದ ಎರಡು ವಿದೇಶಿ ಪಿಸ್ತೂಲನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಶತ್ರುಗಳ ಮಾಹಿತಿ ಮೂಲಕ್ಕೆ ಅಡ್ಡಿ ಉಂಟುಮಾಡುವ ಕಾರ್ಯತಂತ್ರವನ್ನು ಈ ಕಾರ್ಯಾಚರಣೆಯಲ್ಲಿ ಬಳಸಲಾಯಿತು ಎಂದಿದ್ದಾರೆ.

ಶಸ್ತ್ರಾಸ್ತ್ರಗಳ ಸಾಗಾಣೆ ಮಾತ್ರವಲ್ಲದೇ, ಆರೋಪಿಗಳು ಹಣಕಾಸು ನೆರವನ್ನೂ ಅಮೆರಿಕದಿಂದ ಪಡೆಯುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಉಗ್ರರ ಜಾಲವನ್ನು ಭೇದಿಸುವ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯ ಸಂಬಂಧಪಟ್ಟ ಸೆಕ್ಷನ್‌ಗಳ ಅಡಿ ಹರ್ವಿಂದರ್‌ ರಿಂದಾ ಮತ್ತು ಗೋಲ್ಡಿ ವಿರುದ್ಧ ಅಮೃತಸರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.

ಇದಕ್ಕೂ ಮೊದಲು, ಆಗಸ್ಟ್‌ 13ರಂದು ರಾಜ್ಯದ ತರನ್ ತಾರನ್‌ ಸಾಹಿಬ್‌ನಲ್ಲಿ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದ ಪೊಲೀಸರು ಮೂವರನ್ನು ಬಂಧಿಸಿ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT