ತ್ರಿಶೂರ್/ತಿರುವನಂತಪುರ: ‘ಕೆಲ ದಿನಗಳಲ್ಲಿ ಕೇರಳದ ಅತಿರಪಿಲ್ಲಿ ಅರಣ್ಯ ಪ್ರದೇಶದಲ್ಲಿ ಆಂಥ್ರಾಕ್ಸ್ ಸೋಂಕಿನಿಂದಾಗಿ ಕೆಲ ಕಾಡು ಹಂದಿಗಳು ಮೃತಪಟ್ಟಿವೆ. ಆದರೆ ಜಾನುವಾರುಗಳಲ್ಲಿ ಸೋಂಕು ಕಾಣಿಸಿಕೊಂಡಿಲ್ಲ. ಹೀಗಾಗಿ ಯಾರೂ ಆತಂಕಕ್ಕೆ ಒಳಗಾಗಬಾರದು’ ಎಂದುತ್ರಿಶೂರ್ ಜಿಲ್ಲಾಧಿಕಾರಿ ಹರಿತಾ ವಿ.ಕುಮಾರ್ ತಿಳಿಸಿದ್ದಾರೆ.

‘ಅರಣ್ಯ ವ್ಯಾಪ್ತಿಯಲ್ಲಿನ ಸಾಕು ಪ್ರಾಣಿಗಳಲ್ಲೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಪ್ರಾಣಿಗಳಿಂದ ಮನುಷ್ಯರಿಗೆ ಸೋಂಕು ಹರಡುವ ಸಾಧ್ಯತೆಯೂ ತೀರಾ ಕಡಿಮೆ. ಹೀಗಾಗಿ ಗಾಬರಿಪಡುವ ಬದಲು ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಹೇಳಿದ್ದಾರೆ.

‘ಮುಂಜಾಗ್ರತಾ ದೃಷ್ಟಿಯಿಂದ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ಜಾನುವಾರುಗಳಿಗೆ ಲಸಿಕೆ ನೀಡಲಾಗುತ್ತಿದೆ. ಸೋಂಕು ನಿಯಂತ್ರಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದಿದ್ದಾರೆ.

‘ಆರೋಗ್ಯ ಹಾಗೂ ಪಶುಸಂಗೋಪನಾ ಇಲಾಖೆಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿವೆ. ಸೋಂಕು ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಅರಣ್ಯ ಸಚಿವ ಎ.ಕೆ.ಶಶೀಂಧ್ರನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.