ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದು, ಮುಂದಿನ 25 ವರ್ಷಗಳವರೆಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಸಾಧ್ಯವೆಂದು ಎಂದು ಬಿಜೆಪಿ ರಾಷ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಭಾನುವಾರ ಹೇಳಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಾಪ್ರಾಯಗಳು ತಲೆದೂರಿದ್ದು, ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಸಾಧ್ಯ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದ್ದು, ಸ್ವೀಕರ್ ಸಿಪಿ ಜೋಶಿ ಒಳಗೊಂಡತೆ ಕಾಂಗ್ರೆಸ್‌ನ ಸಚಿವರು ಚುನಾವಣೆಯಲ್ಲಿ ಸೋಲಿನ ಅನುಭವ ಪಡೆಯಲಿದ್ದಾರೆ. ಬಿಜೆಪಿಯು ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಧಾನಸಭಾ ಚುನಾವಣೆ 2023ರಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಜನರು ಸಿದ್ಧರಾಗಿದ್ದಾರೆ. ಜನರು ಉತ್ತಮ ಆಡಳಿತ ಬಯಸುತ್ತಾರೆ. ಕೋವಿಡ್ -19 ಹಾಗೂ ತಮ್ಮ ಸರ್ಕಾರವನ್ನು ಉರುಳಿಸುವ ಪಿತೂರಿಯಂತಹ ಸವಾಲುಗಳ ಹೊರತಾಗಿಯೂ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ತಿಳಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.