ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಛತ್ತೀಸಗಢ: 9 ನಕ್ಸಲರ ಬಂಧನ

Published 3 ಜೂನ್ 2024, 16:15 IST
Last Updated 3 ಜೂನ್ 2024, 16:15 IST
ಅಕ್ಷರ ಗಾತ್ರ

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸೋಮವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಒಂಬತ್ತು ನಕ್ಸಲರನ್ನು ಬಂಧಿಸಿದ್ದಾರೆ. ಅಲ್ಲದೆ, ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಬಳಿಯಿದ್ದ ಕರಪತ್ರಗಳು ಮತ್ತು ಬ್ಯಾನರ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ

ಈ ಪೈಕಿ ಬೆನ್ಶರಾಮ ಎಂಬಲ್ಲಿ ಬಂಧಿಸಲಾದ ನಾಲ್ವರು ನಕ್ಸಲರು, ಇದೇ ವರ್ಷದಲ್ಲಿ ಛತ್ತೀಸಗಢ ಸಶಸ್ತ್ರ ಪಡೆಯ ಕಂಪನಿಯ ಕಮಾಂಡರ್ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ. ಜೊತೆಗೆ ಮೊಬೈಲ್ ಫೋನ್ ಗೋಪುರಕ್ಕೆ ಬೆಂಕಿ ಇಟ್ಟ ಕೃತ್ಯದಲ್ಲೂ ಭಾಗಿಯಾಗಿದ್ದರು. ಈ ನಾಲ್ವರ ಪೈಕಿ ಬೋಟಿ ಮಾದ್ವಿ (36) ಬೆನ್ಶರಾಮ ‘ಜನಾತನ ಸರ್ಕಾರ’ ಗ್ರೂಪ್‌ನ ಮುಖ್ಯಸ್ಥನಾಗಿದ್ದು, ಈತನ ತಲೆಗೆ 1 ಲಕ್ಷ ಇನಾಮು ಘೋಷಿಸಲಾಗಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT