ಅಮರಾವತಿ: 2021–22ನೇ ಶೈಕ್ಷಣಿಕ ವರ್ಷದಿಂದ 1ರಿಂದ 7ನೇ ತರಗತಿವರೆಗೆ ಸಿಬಿಎಸ್ಇ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರಲು ಆಂಧ್ರ ಪ್ರದೇಶ ಸರ್ಕಾರ ನಿರ್ಧರಿಸಿದೆ.

‘ಕ್ರಮೇಣ ಈ ವ್ಯವಸ್ಥೆಯು 8ರಿಂದ 10ನೇ ತರಗತಿವರೆಗೂ ಮುಂದುವರಿಯಲಿದೆ. ಹೀಗೆ 2024ರೊಳಗೆ 1 ರಿಂದ 10 ನೇ ತರಗತಿಗಳಲ್ಲಿ ಸಂಪೂರ್ಣವಾಗಿ ಸಿಬಿಎಸ್ಇ ಶಿಕ್ಷಣ ಪದ್ಧತಿ ಬರಲಿದೆ’ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

‘ಬುಧವಾರ ಮುಖ್ಯಮಂತ್ರಿ ಅವರೊಂದಿಗೆ ಕೇವಲ ಒಂದು ಪ್ರಸ್ತಾವದ ಬಗ್ಗೆ ಚರ್ಚಿಸಿದ್ದೇವೆ. ಈ ವ್ಯವಸ್ಥೆಯನ್ನು ಜಾರಿಗೊಳಿಸುವ ಮುನ್ನ ಲಾಭ–ನಷ್ಟಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಈ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ’ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

1 ರಿಂದ 6 ನೇ ತರಗತಿಯವರೆಗೆ ಎಲ್ಲಾ ಸರ್ಕಾರಿ ಶಾಲೆಗಳನ್ನು ಆಂಗ್ಲ ಮಾಧ್ಯಮವನ್ನಾಗಿ ಪರಿವರ್ತಿಸುವ ಕುರಿತಾದ ಅರ್ಜಿಯ ವಿಚಾರಣೆಯು ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿದೆ. ಇದರ ಮಧ್ಯೆ ಆಂಧ್ರಪ್ರದೇಶ ಸರ್ಕಾರದ ಈ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಸಿಬಿಎಸ್ಇ ಮೂಲಕ ತೆಲುಗು ಮಾಧ್ಯಮವನ್ನು ಸಂಪೂರ್ಣವಾಗಿ ತೆಗೆದು ಹಾಕಲು ಪ್ರಯತ್ನಿಸುತ್ತಿದ್ದಾರೆ. ಸಿಬಿಎಸ್ಇ ಅಡಿ ತೆಲುಗು ಭಾಷೆ ಕೇವಲ ಒಂದು ಅಧ್ಯಯನ ವಿಷಯವಾಗಿ ಮಾತ್ರ ಉಳಿಯಲಿದೆ. ಪಠ್ಯಕ್ರಮ ಹಿಂದಿ ಅಥವಾ ಇಂಗ್ಲಿಷ್ನಲ್ಲಿ ಇರಲಿದೆ ಎಂಬ ಮಾತುಗಳು ಕೇಳಿಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.