ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರಪ್ರದೇಶ ರೈಲು ದುರಂತ: ಕೇಂದ್ರದ ವಿರುದ್ಧ ಖರ್ಗೆ ಆಕ್ರೋಶ

Published 30 ಅಕ್ಟೋಬರ್ 2023, 14:14 IST
Last Updated 30 ಅಕ್ಟೋಬರ್ 2023, 14:14 IST
ಅಕ್ಷರ ಗಾತ್ರ

ನವದೆಹಲಿ: ಆಂಧ್ರಪ್ರದೇಶದಲ್ಲಿ ಭಾನುವಾರ ಸಂಭವಿಸಿದ ರೈಲು ದುರಂತಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ. 

ನೂತನ ರೈಲು ಯೋಜನೆಗಳಿಗೆ ಚಾಲನೆ ನೀಡುವಾಗ ತೋರಿಸುವ ಉತ್ಸಾಹವನ್ನು, ರೈಲ್ವೆ ಸುರಕ್ಷತೆ ಮತ್ತು ಪ್ರಯಾಣಿಕರ ಯೋಗಕ್ಷೇಮದ ಕುರಿತಾಗಿಯೂ ತೋರಿಸಬೇಕು ಎಂದು ಒತ್ತಾಯಿಸಿದ್ದಾರೆ. 

ಈ ಸಂಬಂಧ ‘ಎಕ್ಸ್’ನಲ್ಲಿ ಟ್ವೀಟ್ ಮಾಡಿರುವ ಅವರು, ವಿಜಯನಗರ ಜಿಲ್ಲೆಯಲ್ಲಿ ನಡೆದ ರೈಲು ದುರಂತದ ಘಟನೆಯಲ್ಲಿ ಸಂಭವಿಸಿದ ಸಾವು ಮತ್ತು ಹಲವರು ಗಾಯಗೊಂಡಿರುವುದನ್ನು ತಿಳಿದು ಅತೀವ ದುಃಖವಾಯಿತು. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ. 

ಈ ದುರಂತದಲ್ಲಿ ಸಂತ್ರಸ್ಥರಾದವರಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ಕಲ್ಪಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ರೈಲು ದುರಂತದಲ್ಲಿ ಸಂಭವಿಸಿದ ಸಾವು ಮತ್ತು ನೋವುಗಳಿಗೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮರುಕ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT