ಜೈಪುರ: ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಕೇವಲ ಕ್ಷಮೆಯಾಚಿಸಿದರೆ ಸಾಕಾಗುವುದಿಲ್ಲ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಣಿಪುರ ಸಿಎಂ ಜನತೆಯ ಕ್ಷಮೆಯಾಚಿಸಿದ್ದಾರೆ ಅಂದ ಮಾತ್ರಕ್ಕೆ ಅವರು ಮಾಡಿದ ತಪ್ಪನ್ನು ಮರೆಯಲಾಗದು. ಮಣಿಪುರದಲ್ಲಿ ನಡೆದಿರುವುದು ದೇಶದ ಇತಿಹಾಸದಲ್ಲಿ ಬೇರೆ ಯಾವುದೇ ರಾಜ್ಯದಲ್ಲಿ ನಡೆದಿಲ್ಲ. ಆದರೆ, ಕೇಂದ್ರ ಸರ್ಕಾರ ಏನನ್ನೂ ಮಾಡಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ಸಹ ನೀಡಿಲ್ಲ’ ಎಂದು ಗೆಹಲೋತ್ ಹೇಳಿದ್ದಾರೆ.

‘ಕೋವಿಡ್ ಸಮಯದಲ್ಲಿ ಪ್ರಧಾನಿ ಮೋದಿ ಅವರು ತಟ್ಟೆಗಳನ್ನು ಬಡಿಯಲು ಕರೆ ನೀಡಿದ್ದರು. ಅವರ ಮಾತನ್ನು ಜನರು ಕೇಳಿದ್ದರು. ಅದೇ ರೀತಿ ಅವರು ಮಣಿಪುರಕ್ಕೆ ಭೇಟಿ ನೀಡಿ ಶಾಂತಿಯ ಕರೆ ನೀಡಿದ್ದರೆ, ಬಹುಶಃ ಕಾದಾಡುತ್ತಿರುವ ಎರಡು ಸಮುದಾಯಗಳಿಗೆ ಸೇರಿದ ಜನರು ಕೂಡ ಅವರ ಮಾತನ್ನು ಕೇಳುತ್ತಿದ್ದರು. ಆದರೆ, ಮೋದಿ ಅವರು ಮಣಿಪುರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದರು’ ಎಂದು ಗೆಹಲೋತ್ ಹೇಳಿದ್ದಾರೆ.

ಮಣಿಪುರವನ್ನು ನಿರ್ಲಕ್ಷಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗೆಹಲೋತ್ ವಾಗ್ದಾಳಿ ನಡೆಸಿದ್ದಾರೆ.

ಮಣಿಪುರದಲ್ಲಿ ಕಂಡುಬಂದ ಜನಾಂಗೀಯ ಸಂಘರ್ಷ ಕುರಿತಂತೆ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಮಂಗಳವಾರ ಕ್ಷಮೆ ಕೋರಿದ್ದರು. ರಾಜ್ಯದಲ್ಲಿ ಏನು ಸಂಭವಿಸಿದೆಯೋ ಅದಕ್ಕಾಗಿ ನಾನು ಕ್ಷಮೆ ಕೋರಲು ಬಯಸುತ್ತೇನೆ. ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದರೆ, ನೂರಾರು ಜನರು ತಮ್ಮ ಮನೆಗಳನ್ನು ತೊರೆಯಬೇಕಾಯಿತು. ಎಲ್ಲ ಸಮುದಾಯಗಳು ಈ ಹಿಂದಿನ ತಪ್ಪುಗಳನ್ನು ಮರೆಯಬೇಕು ಹಾಗೂ ಕ್ಷಮಿಸಬೇಕು ಎಂದು ಮನವಿ ಮಾಡಿದ್ದರು.
.ಮಣಿಪುರ ಹಿಂಸಾಚಾರ: ರಾಜ್ಯದ ಜನರ ಕ್ಷಮೆಯಾಚಿಸಿದ ಸಿಎಂ ಬಿರೇನ್ ಸಿಂಗ್.ಮಣಿಪುರ ಹಿಂಸಾಚಾರ: ರಾಜ್ಯದ ಜನರ ಕ್ಷಮೆಯಾಚಿಸಿದ ಸಿಎಂ ಬಿರೇನ್ ಸಿಂಗ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.