ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀಸಾ ನವೀಕರಣ ಅರ್ಜಿ: ‘ಡ್ರಾಪ್‌ಬಾಕ್ಸ್‌’ ಮೂಲಕ ಮಾತ್ರ ಸಲ್ಲಿಸಲು ಸೂಚನೆ

Last Updated 2 ಫೆಬ್ರುವರಿ 2023, 10:47 IST
ಅಕ್ಷರ ಗಾತ್ರ

ನವದೆಹಲಿ: ವೀಸಾ ನವೀಕರಣಕ್ಕೆ ಸಂಬಂಧಿಸಿದ ಅರ್ಜಿಗಳನ್ನು ‘ಡ್ರಾಪ್‌ಬಾಕ್ಸ್‌’ ಮೂಲಕವೇ ಸಲ್ಲಿಸಬೇಕು. ಇ–ಮೇಲ್‌ ಮೂಲಕ ಕಳುಹಿಸುವ ಈ ಕುರಿತ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಮೆರಿಕ ರಾಯಭಾರ ಕಚೇರಿ ತಿಳಿಸಿದೆ.

‘ಈ ವರ್ಷ, ಭಾರತೀಯ ವಿದ್ಯಾರ್ಥಿಗಳಿಂದ ದಾಖಲೆ ಸಂಖ್ಯೆಯಲ್ಲಿ ವೀಸಾ ಅರ್ಜಿಗಳು ಸಲ್ಲಿಕೆಯಾಗಲಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿನ ರಾಯಭಾರ ಹಾಗೂ ಕಾನ್ಸುಲೇಟ್‌ ಕಚೇರಿಗಳು ಸಿದ್ಧತೆ ಮಾಡಿಕೊಂಡಿವೆ’ ಎಂದು ಮುಂಬೈನಲ್ಲಿರುವ ಅಮೆರಿಕ ಕಾನ್ಸುಲೇಟ್‌ ಕಚೇರಿಯ ಮುಖ್ಯಸ್ಥ ಜಾನ್‌ ಬಲ್ಲಾರ್ಡ್ ತಿಳಿಸಿದ್ದಾರೆ.

ಕಳೆದ ವರ್ಷ 1.25 ಲಕ್ಷಕ್ಕೂ ಅಧಿಕ ವಿದ್ಯಾರ್ಥಿ ವೀಸಾ ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT