ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಯುಇಟಿ–ಯುಜಿ: ಅರ್ಜಿ ಸಲ್ಲಿಕೆಗೆ ಏ.11 ಕೊನೆ ದಿನ

Last Updated 9 ಏಪ್ರಿಲ್ 2023, 11:00 IST
ಅಕ್ಷರ ಗಾತ್ರ

ನವದೆಹಲಿ: ‘ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಯುಇಟಿ–ಯುಜಿ) ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಭಾನುವಾರ ಮತ್ತೆ ಆರಂಭಗೊಂಡಿತು.

ಅರ್ಜಿ ಸಲ್ಲಿಕೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಮತ್ತೆ ಮೂರು ದಿನಗಳ ಕಾಲ ಅವಕಾಶ ಕಲ್ಪಿಸಿದೆ. ಇದರನ್ವಯ, ಸೋಮವಾರ ಹಾಗೂ ಮಂಗಳವಾರ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

‘ಮಂಗಳವಾರ ರಾತ್ರಿ 11.59ಕ್ಕೆ (ಇದೇ 11ರಂದು) ಅವಧಿ ಕೊನೆಗೊಳ್ಳಲಿದೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು cuet.samarth.ac.in ಗೆ ಭೇಟಿ ನೀಡಬಹುದು’ ಎಂದು ಯುಜಿಸಿ ಮುಖ್ಯಸ್ಥ ಜಗದೀಶ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT