ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷೆ ಜಾರಿಗೆ ವಿಳಂಬ: ಮಹಿಳಾ ಆಯೋಗದ ಮೊರೆ ಹೋದ ನಿರ್ಭಯಾ ತಾಯಿ

ಶಿಕ್ಷೆ ಜಾರಿಗೆ ವಿಳಂಬ
Last Updated 11 ಸೆಪ್ಟೆಂಬರ್ 2018, 11:54 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ತಪ್ಪಿತಸ್ಥರನ್ನು ನೇಣುಗಂಬಕ್ಕೆ ಏರಿಸುವಲ್ಲಿ ಆಗುತ್ತಿರುವ ವಿಳಂಬ ಪ್ರಶ್ನಿಸಿ ಸಂತ್ರಸ್ತೆಯ ತಾಯಿ ದೆಹಲಿ ಮಹಿಳಾ ಆಯೋಗದ ಮೊರೆ ಹೋಗಿದ್ದಾರೆ.

ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದರೂ ಶಿಕ್ಷೆ ಜಾರಿಗೆ ವಿಳಂಬ ಮಾಡುತ್ತಿರುವುದು ಏಕೆ ಎಂದು ಪ್ರಶ್ನಿಸಿರುವ ಮಹಿಳಾ ಆಯೋಗ, ತಿಹಾರ್‌ ಜೈಲಿನ ಅಧಿಕಾರಿಗಳಿಗೆ ನೋಟಿಸ್‌ ನೀಡಿದೆ.

ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳು ಸದ್ಯ ದೆಹಲಿಯ ತಿಹಾರ್‌ ಜೈಲಿನಲ್ಲಿದ್ದಾರೆ.

ಸಾಧ್ಯವಾದಷ್ಟೂ ಬೇಗ ಅತ್ಯಾಚಾರಿಗಳನ್ನು ನೇಣುಗಂಬಕ್ಕೆ ಏರಿಸುವಂತೆ ನಿರ್ಭಯಾ ತಾಯಿ ಆಶಾದೇವಿ ಅವರು ಆಯೋಗಕ್ಕೆ ಮನವಿ ಮಾಡಿದ್ದಾರೆ.

ತ‍ಪ್ಪಿತಸ್ಥರಿಗೆ ಶಿಕ್ಷೆಯಾದಾಗ ಮಾತ್ರ ತಮ್ಮ ಮಗಳಿಗೆ ಆದ ಅನ್ಯಾಯಕ್ಕೆ ನ್ಯಾಯ ದೊರೆಯುತ್ತದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆಯೂ ಎರಡು ಬಾರಿ ಅವರು ದೆಹಲಿ ಮಹಿಳಾ ಆಯೋಗದ ಮೆಟ್ಟಿಲೇರಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ.

2012ರ ಡಿಸೆಂಬರ್‌ 15ರಂದು ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ 23 ವರ್ಷದ ನರ್ಸಿಂಗ್‌ ವಿದ್ಯಾರ್ಥಿನಿಯ ಮೇಲೆ ಆರು ಜನರು ಅಮಾನುಷವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಬಳಿಕ ಆಕೆಯನ್ನು ಬಸ್‌ನಿಂದ ಹೊರ ಎಸೆಯಲಾಗಿತ್ತು.

ಸಾವು, ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಸಂತ್ರಸ್ತ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕಳಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ 15 ದಿನಗಳ ನಂತರ ಆಕೆ ಸಾವನ್ನಪ್ಪಿದ್ದಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT