ಬೆಂಗಳೂರು: ದೇಶದ ಭದ್ರತಾ ವ್ಯವಸ್ಥೆಯಲ್ಲಿ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ (ಸಿಐಎಸ್ಎಫ್) ಮಹಿಳಾ ಬೆಟಾಲಿಯನ್ ಪ್ರಾರಂಭಿಸಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ.

ಸಿಐಎಸ್ಎಫ್ನಲ್ಲಿ ಸದ್ಯ ಶೇಕಡಾ 7ರಷ್ಟು ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಮಹಿಳಾ ಬೆಟಾಲಿಯನ್ ಪ್ರಾರಂಭಿಸಲು ಅನುಮೋದನೆ ದೊರೆತಿದ್ದು, ದೇಶದಲ್ಲಿರುವ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಪಡೆಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶ ಸಿಗಲಿದೆ. ಮಹಿಳಾ ಸಿಬ್ಬಂದಿಯನ್ನು ವಿಐಪಿಗಳ ಭದ್ರತೆ, ವಿಮಾನ ನಿಲ್ದಾಣ, ಮೆಟ್ರೊ ನಿಲ್ದಾಣಗಳಲ್ಲಿ ನಿಯೋಜಿಸಲಾಗುತ್ತದೆ ಎಂದು ಸಿಐಎಸ್ಎಫ್ ಪ್ರಕಟಣೆ ತಿಳಿಸಿದೆ.

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಉಪಕ್ರಮದ ಭಾಗವಾಗಿ ಸಿಐಎಸ್ಎಫ್ ಇ–ಸೇವಾ ಬುಕ್ಗೆ ಚಾಲನೆ ನೀಡಿದೆ. ಇಲ್ಲಿ ಸಿಐಎಸ್ಎಫ್ನಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ದಿನಾಂಕದಿಂದ ಎಲ್ಲ ರೀತಿಯ ಪಿಂಚಣಿ ಸೌಲಭ್ಯಗಳು ಪಡೆಯಲು ಸಹಾಯಕವಾಗಲಿದೆ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.