ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇಡಿ, ಸಿಬಿಐ, ಐಟಿ ಅಧಿಕಾರಿಗಳು ಮೋದಿ ಜವಾನರೇ? ಖರ್ಗೆ ಕಿಡಿ

Published : 6 ನವೆಂಬರ್ 2023, 12:51 IST
Last Updated : 6 ನವೆಂಬರ್ 2023, 12:51 IST
ಫಾಲೋ ಮಾಡಿ
Comments

ಜೋಧಪುರ (ರಾಜಸ್ಥಾನ) ‘ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಬರುವ ಮುನ್ನ ಇಡಿ, ಸಿಬಿಐ ಹಾಗೂ ಆದಾಯ ತೆರಿಗೆಯ ಅಧಿಕಾರಿಗಳನ್ನು ಮೊದಲು ಕಳುಹಿಸಿಕೊಡುತ್ತಾರೆ. ಹಾಗಾದರೆ ಸರ್ಕಾರಿ ಇಲಾಖೆಯ ಅಧಿಕಾರಿಗಳು ಮೋದಿಯ ಜವಾನರೇ‘ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ರಾಜಸ್ಥಾನ ಚುನಾವಣಾ ಪ್ರಚಾರದ ರ್‍ಯಾಲಿಯನ್ನು ಉದ್ದೇಶಿಸಿ ಜೋಧಪುರದಲ್ಲಿ ಮಾತನಾಡಿದ ಅವರು ಚುನಾವಣೆಯ ಸಂದರ್ಭಗಳಲ್ಲಿ ಕಾಂಗ್ರೆಸ್‌ ನಾಯಕರನ್ನು ಗುರಿಯಾಗಿಸಿಕೊಂಡು ದೇಶದ ವಿವಿಧ ಭಾಗಗಳಲ್ಲಿ ದಾಳಿಗಳು ನಡೆಸಲಾಗುತ್ತಿದೆ ಎಂದರು

‘ಚುನಾವಣೆಯ ಸಂದರ್ಭಗಳಲ್ಲಿ ಮಾತ್ರ ಮೋದಿ ಅವರಿಗೆ ಬಡವರು ನೆನಪಾಗುತ್ತಾರೆ. ಉಳಿದ ಸಮಯದಲ್ಲಿ ಉದ್ಯಮಿ ಆದಾನಿ ಬಗ್ಗೆ ಚಿಂತಿಸುತ್ತಾರೆ‘ ಎಂದು ಉಚಿತ ಪಡಿತರ ಅವಧಿಯನ್ನು ವಿಸ್ತರಿಸಿದ ಬಳಿಕ ಖರ್ಗೆ ವಾಗ್ದಾಳಿ ನಡೆಸಿದರು

ರಾಜನಾದವನು ( ಮುಖ್ಯಮಂತ್ರಿ ಅಥವಾ ಪ್ರಧಾನಿ ಮಂತ್ರಿ) ಬಡವರಿಗೆ ಸಹಾಯ ಮಾಡುತ್ತಾನೆ. ಆದರೆ ಇವರ ( ಮೋದಿ) ಅಧಿಕಾರದ ಅವಧಿಯಲ್ಲಿ ಬಡವರು ಬಡವರಾಗಿಯೇ ಇದ್ದಾರೆ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಅಕೋಶ್‌ ಗೆಹಲೋತ್‌ ಇಂದು( ಸೋಮವಾರ) ನಾಮಪತ್ರ ಸಲ್ಲಿಸಿದ್ದಾರೆ.

ರಾಜಸ್ಥಾನ ವಿಧಾನಸಭೆಗೆ ನ.25ರಂದು ಚುನಾವಣೆ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT