ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜುನ ಪ್ರಶಸ್ತಿ ಪುರಸ್ಕೃತ ಡಿಎಸ್‌ಪಿ ಹತ್ಯೆ; 48 ಗಂಟೆಗಳಲ್ಲಿ ಆರೋಪಿ ಬಂಧನ

Published 4 ಜನವರಿ 2024, 12:58 IST
Last Updated 4 ಜನವರಿ 2024, 13:22 IST
ಅಕ್ಷರ ಗಾತ್ರ

ನವದೆಹಲಿ: ಅರ್ಜುನ ಪ್ರಶಸ್ತಿ ಪುರಸ್ಕೃತ ಪೊಲೀಸ್ ಅಧಿಕಾರಿಯ ಹತ್ಯೆಗೆ ಸಂಬಂಧಿಸಿದಂತೆ ಪಂಜಾಬ್‌ನ ಜಲಂಧರ್‌ ಠಾಣೆಯ ‍‍ಪೊಲೀಸರು, ಕೃತ್ಯ ನಡೆದ 48 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಟೋ ರಿಕ್ಷಾ ಚಾಲಕ ವಿಜಯಕುಮಾರ್‌ ಬಂಧಿತ ಆರೋಪಿ.

2000 ಇಸವಿಯ ಅರ್ಜುನ ಪ್ರಶಸ್ತಿಗೆ ದೇವೊಲ್ ಭಾಜನರಾಗಿದ್ದರು. ನಿಗದಿತ ಸ್ಥಳಕ್ಕೆ ತಮ್ಮನ್ನು ಕರೆದೊಯ್ಯುವ ವಿಷಯವಾಗಿ ದೇವೊಲ್ ಹಾಗೂ ಆರೋಪಿ ನಡುವೆ ವಾಗ್ವಾದ ನಡೆದಿತ್ತು. ಇದು ವಿಕೋಪಕ್ಕೆ ತಿರುಗಿದ್ದರಿಂದ ಆರೋಪಿ ಗುಂಡಿಟ್ಟು ಹತ್ಯೆ ಮಾಡಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಂಧಿತ ಮಾದಕದ್ರವ್ಯ ವ್ಯಸನಿಯಾಗಿದ್ದ. ಜಗಳ ವಿಕೋಪಕ್ಕೆ ತಿರುಗಿದಾಗ ದೇವೊಲ್ ಬಳಿ ಇದ್ದ ಇಲಾಖೆಯ ರಿವಾಲ್ವಾರ್ ಕಸಿದುಕೊಂಡ ವಿಜಯಕುಮಾರ್‌, ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ದೇವೊಲ್ ಮೃತದೇಹ ಬಸ್ತಿ ಬಾವಾ ಖೇಲ್ ಬಳಿ ಸಿಕ್ಕಿತು ಎಂದು ಪೊಲೀಸರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಮೊದಲಿಗೆ ಇದೊಂದು ಹಿಟ್‌ ಅಂಡ್ ರನ್‌ ಪ್ರಕರಣ ಎಂದು ಭಾವಿಸಿದ್ದರು. ಆದರೆ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT